ವೀರಾಜಪೇಟೆ, ಅ. ೨೫: ವೀರಾಜಪೇಟೆಯ ಪ್ರಗತಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವಿನಯ ವಿ.ಎಸ್., ಪ್ರೇಕ್ಷಾ ಹಾಗೂ ವರ್ಷಿಣಿ ಅವರು ಅಂಡರ್-೧೫ ಮಂಗಳೂರು ವಲಯದ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಈ ಮೂವರು ಪ್ರತಿಭಾವಂತ ಆಟಗಾರ್ತಿಯರು ಬೆಂಗಳೂರಿನ ಪ್ರತಿಷ್ಠಿತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರ್ ವಲಯ ಕ್ರಿಕೆಟ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಲಯವನ್ನು ಪ್ರತಿನಿಧಿಸಲಿದ್ದಾರೆ.