ಮಡಿಕೇರಿ, ಅ. ೨೬: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಚಟುವಟಿಕೆಗಳ ಕುರಿತು ಜಿಲ್ಲಾಮಟ್ಟದ ಕೌಶಲ್ಯ ಸಮಿತಿ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿರುವ ಉದ್ದೇಶದಿಂದ ತಾ. ೨೭ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆ ಏರ್ಪಡಿಸಲಾಗಿದೆ.