ಶ್ರೀಮಂಗಲ, ಅ. ೨೬: ಚಂಗ್ರಾAದಿ ಪತ್ತಾಲೋದಿಯ ಕಾರ್ಯಕ್ರಮವನ್ನು ಇಷ್ಟೊಂದು ವಿಜೃಂಭಣೆಯಿAದ ಆಚರಿಸಬಹುದೆಂಬ ಕಲ್ಪನೆ ಇರಲಿಲ್ಲ. ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಇದೊಂದು ಅತ್ಯುತ್ತಮ ಪ್ರಯತ್ನ ಎಂದು ವಕೀಲ ಜಮ್ಮಡ ಅಯ್ಯಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಚಂಗ್ರಾAದಿ ಪತ್ತಾಲೋದಿ ಪೈತಾಂಡ್ ನಮ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಹತ್ತು ದಿನಗಳವರೆಗೆ ಜನೋತ್ಸವ ರೀತಿಯ ಕಾರ್ಯಕ್ರಮ ಮಾಡುತ್ತಿರುವ ವಿಷಯ ತಿಳಿದು ಆಶ್ಚರ್ಯವಾಯಿತು. ಒಂದು ದಿನದ ಕಾರ್ಯಕ್ರಮಕ್ಕೇ ಎಷ್ಟೋ ದಿನದ ತಯಾರಿ ಬೇಕಾಗುತ್ತದೆ. ಅಂತಹದರಲ್ಲಿ ನಿರಂತರ ಹತ್ತು ದಿನದ ಕಾರ್ಯಕ್ರಮಕ್ಕೆ ಅದೆಷ್ಟು ಶ್ರಮ ವಹಿಸಿರಬಹುದೆಂದು ಊಹಿಸಲೂ ಸಾಧ್ಯವಿಲ್ಲ. ಈ ಕಾರ್ಯಕ್ರಮದಿಂದ ಕೊಡವ ಸಂಸ್ಕೃತಿಯ ಬಗ್ಗೆ ಚೆನ್ನಾಗಿ ತಿಳಿದುಕೊಳ್ಳಬಹುದು. ಅದೆಷ್ಟೋ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಎಲ್ಲಾರೂ ಒಂದಾಗಿ ಸೇರಲು ಸಿಕ್ಕಿರುವ ಈ ಅವಕಾಶ ಬಳಸಿಕೊಂಡು ಕಲಾವಿದರು ಇನ್ನಷ್ಟು ಬೆಳೆಯಬೇಕೆಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿ ಅಂತರರಾಷ್ಟಿçÃಯ ಪರ್ವತಾರೋಹಿ ಜಮ್ಮಡ ಪ್ರೀತ್ ಅಯ್ಯಣ್ಣ ಮಾತನಾಡಿ ಸಾಧಿಸಬೇಕೆಂಬ ಛಲದ ಮುಂದೆ ವಯಸ್ಸು ನಗಣ್ಯ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರಿರುವುದನ್ನು ಗಮನಿಸಿದರೆ ಕೊಡವತಿಯರಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಎಷ್ಟೊಂದು ಗೌರವ ಹಾಗೂ ಅಭಿಮಾನವಿದೆ ಎಂಬುದು ತಿಳಿಯುತ್ತದೆ. ಮಹಿಳೆಯರೆಲ್ಲರೂ ಕೇವಲ ಅಡುಗೆ ಮನೆಗೆ ಸೀಮಿತವಾಗದೆ ತಮ್ಮ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡಿ. ಕೊಡವ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಎಲ್ಲರೂ ಕೊಡವ ಭಾಷೆಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕ ಮಾತನಾಡಿದ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಕೈಬಿಲೀರ ಹರೀಶ್ ಅಪ್ಪಯ್ಯ, ಕೊಡವ ಸಮಾಜ ಆರಂಭವಾದ ಹಿನ್ನೆಲೆಯನ್ನು ಸಭೆಗೆ ತಿಳಿಸುವುದರೊಂದಿಗೆ ಕೊಡವರ ಜನಸಂಖ್ಯೆ ವೃದ್ಧಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನಮ್ಮ ಸಮಾಜದಿಂದ ತಾವಳಗೇರಿ ಮೂಂದ್ ನಾಡ್ ವ್ಯಾಪ್ತಿಯ ಕೊಡವ ಕುಟುಂಬಕ್ಕೆ ಜನಿಸುವ ೩ನೆ ಮಗುವಿನ ಹೆಸರಿನಲ್ಲಿ ಐವತ್ತು ಸಾವಿರ ರೂ. ಹಾಗೂ ೪ನೆ ಮಗುವಿನ ಹೆಸರಿನಲ್ಲಿ ಒಂದು ಲಕ್ಷ ರೂ.ಗಳನ್ನು ಠೇವಣಿ ಇಡುವ ಯೋಜನೆಯ ಮಾಹಿತಿ ನೀಡಿದರು.
ಸಮಾಜದ ಮಾಜಿ ಉಪಾಧ್ಯಕ್ಷ ಮಾಣೀರ ವಿಜಯ ನಂಜಪ್ಪ ಮಾತನಾಡಿ, ತಾವು ಆಡಳಿತ ಮಂಡಳಿಯಲ್ಲಿದ್ದಾಗ ಆರಂಭವಾದ ಈ ಚಂಗ್ರಾAದಿ ಪತ್ತಾಲೋದಿ ಕಾರ್ಯಕ್ರಮವು ವರ್ಷದಿಂದ ವರ್ಷಕ್ಕೆ ಅತಿ ಹೆಚ್ಚು ಜನಾಕರ್ಷಣೆ ಪಡೆಯುವುದರೊಂದಿಗೆ ಹತ್ತನೆ ವರ್ಷಾಚರಣೆ ನಡೆಸುತ್ತಿರುವ ಬಗ್ಗೆ ಹೆಮ್ಮೆ ಎನಿಸುತ್ತಿದೆ ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ಚೆಟ್ಟಂಗಡ ವಿಜಯ ಕಾರ್ಯಪ್ಪ ಮಾತನಾಡಿ ಕೊಡವರ ಜನಸಂಖ್ಯೆ ವೃದ್ದಿಗೆ ವಯಸ್ಸಿಗೆ ಬಂದ ಯುವಕ ಯುವತಿಯರಿಗೆ ಮದುವೆ ಮಾಡಿಸುವ ಸಲುವಾಗಿ ಕೊಡವ ಸಮಾಜದ ವತಿಯಿಂದ ತಂದ್ ಬೆಂದು ಕಾರ್ಯಕ್ರಮ ನಡೆಸಲು ಸಲಹೆ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀಮಂಗಲ ನಾಡ್ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪೆಮ್ಮಂಡ ಸಭಿತ ಕುಶಾಲಪ್ಪ ಹಾಗೂ ಸಂಭ್ರಮ ಪೊಮ್ಮಕ್ಕಡ ಕೂಟದ ಸದಸ್ಯೆ ಅಜ್ಜಮಡ ಸ್ಮಿತ ರಂಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶ್ರೀಮಂಗಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಸದಸ್ಯೆ ಚಟ್ಟಂಡ ಲತ ಚರ್ಮಣ ಪ್ರಾರ್ಥಿಸಿ, ಟಿ.ಶೆಟ್ಟಿಗೇರಿ ಕೊಡವ ಸಮಾಜದ ಖಜಾಂಚಿ ಚಂಗುಲAಡ ಸತೀಶ್ ಸ್ವಾಗತಿಸಿ, ಸಾಂಸ್ಕೃತಿಕ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ನಿರೂಪಿಸಿ, ಕಾರ್ಯದರ್ಶಿ ಕೋಟ್ರಮಡ ಸುಮಂತ್ ಮಾದಪ್ಪ ವಂದಿಸಿದರು.
ಕೊಡವ ಸಮಾಜದ ಜಂಟಿ ಕಾರ್ಯದರ್ಶಿ ಬಾದುಮಂಡ ವಿಷ್ಣು ಕಾರ್ಯಪ್ಪ, ಕ್ರೀಡಾ ಕಾರ್ಯದರ್ಶಿ ತಡಿಯಂಗಡ ಶಮ್ಮಿ ಸುಬ್ಬಯ್ಯ ನಿರ್ದೇಶಕರಾದ ಚಂಗುಲAಡ ಅಶ್ವಿನಿ ಸತೀಶ್, ತೀತೀರ ಅನಿತ ಸುಬ್ಬಯ್ಯ, ಮಾಣೀರ ದೀಪಕ್, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೋಟ್ರಮಡ ರೇಶ್ಮ ಕಾರ್ಯಪ್ಪ, ಕಾರ್ಯದರ್ಶಿ ಕಳ್ಳಿಚಂಡ ದೀನ ಉತ್ತಪ್ಪ, ಸಂಭ್ರಮ ಪೊಮ್ಮಕ್ಕಡ ಕೂಟದ ಸದಸ್ಯೆ ಅಜ್ಜಮಡ ಸಾವಿತ್ರಿ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಶ್ರೀಮಂಗಲ ನಾಡ್ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ನಡೆದ ಕೊಡವಾಮೆಲ್ ಪಳೆಯಾಮೆರ ನಡ್ಪು’ ಸಾಂಸ್ಕೃತಿಕ ಕಾರ್ಯಕ್ರಮ ಜನಮೆಚ್ಚುಗೆ ಪಡೆಯಿತು.