ಮಡಿಕೇರಿ, ಅ. ೨೬: ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಕುರಿತು ನೀಡಿರುವ ಹೇಳಿಕೆಗೆ ಖರ್ಗೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ನಂತರ ಪ್ರತಿಭಟನಾಕಾರರು ಗಣಪತಿ ಬೀದಿಯಲ್ಲಿರುವ ಕಾಂಗ್ರೆಸ್ ಕಚೇರಿಯತ್ತ ಮೆರವಣಿಗೆಯಲ್ಲಿ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಲು ಮುಂದಾದರು. ಇದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸ್ಥಳದ ಪಕ್ಕದಲ್ಲಿದ್ದ ಮಂತರ್ ಗೌಡ ಅವರ ಭಾವಚಿತ್ರವಿದ್ದ ಬ್ಯಾನರ್ ಅನ್ನು ಕೆಲ ಬಿಜೆಪಿ ಕಾರ್ಯಕರ್ತರು ಹರಿದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಜನರ ಆಶೀರ್ವಾದದಿಂದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾರೆ. ಇಡೀ ವಿಶ್ವವೇ ಅವರಿಗೆ ಗೌರವ ನೀಡುತ್ತಿದೆ. ಅಂತಹ ಶ್ರೇಷ್ಠ ವ್ಯಕ್ತಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಹತಾಶ ಮನೋಭಾವದಿಂದ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ. ಇಂತಹ ರಾಜಕೀಯ ಆಟ ಇನ್ನು ನಡೆಯುವುದಿಲ್ಲ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ದಾಟಿಯಲ್ಲಿ ಉತ್ತರ ನೀಡುವ ಶಕ್ತಿ ಬಿಜೆಪಿಗೂ ಇದೆ. ಆದರೆ ಜನರೇ ಇದಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ನಾಯಕರು ಎಚ್ಚರಿಕೆಯಿಂದ ಮಾತನಾಡಬೇಕು. ಬಿಜೆಪಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಬೋಪಯ್ಯ ಎಚ್ಚರಿಸಿದರು.

ಆರ್‌ಎಸ್‌ಎಸ್ ವತಿಯಿಂದ ಪ್ರತಿವರ್ಷ ವಿಜಯದಶಮಿ ಸಂದರ್ಭದಲ್ಲಿ ಪಥಸಂಚಲನ ನಡೆಸಲಾಗುತ್ತದೆ. ಆದರೆ ಪಥಸಂಚಲನಕ್ಕೂ ನಿರ್ಬಂಧ ವಿಧಿಸುವ ಕೆಲಸ ನಡೆಯುತ್ತಿದೆ. ಆರ್‌ಎಸ್‌ಎಸ್‌ನ ಪಥಸಂಚಲನದಿAದ ಯಾವುದೇ ಕೋಮು ಗಲಭೆ ನಡೆದಿರುವ ಉದಾಹರಣೆ ಇಲ್ಲ. ಹೀಗಿದ್ದರೂ ಪಥಸಂಚಲನಕ್ಕೆ ನಿರ್ಬಂಧ ವಿಧಿಸುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ಚುನಾವಣೆಯ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಆಸ್ತಿಯಾಗಿರುತ್ತಾರೆ. ಆದರೆ ಕಾಂಗ್ರೆಸ್‌ಗೆ ಅಭದ್ರತೆ ಕಾಡುತ್ತಿದ್ದು, ಸಭೆ-ಸಮಾರಂಭಗಳಲ್ಲಿ ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಾಯಿಗೆ ಬಂದAತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

Àನರೇಂದ್ರ ಮೋದಿ ಅವರ ಕುರಿತು ಮಲ್ಲಿಕಾರ್ಜುನ ಖರ್ಗೆ ಬಳಸಿರುವ ಪದಗಳು ಸರಿಯಲ್ಲ. ಇಂತಹ ಹೇಳಿಕೆ ನೀಡಿರುವ ಖರ್ಗೆ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಮೊದಲು ವಜಾಗೊಳಿಸಬೇಕು. ವಿದೇಶಿ ಶಕ್ತಿಗಳ ಬೆಂಬಲದಿAದ ದೇಶದಲ್ಲಿ ನಡೆಯುತ್ತಿರುವ ಹೋರಾಟಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಇದು ಯಾವ ರೀತಿಯ ಸಂಸ್ಕೃತಿ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಸ್ವತಂತ್ರವಾಗಿ ಹೋರಾಟ ನಡೆಸಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ವಿದೇಶಗಳಲ್ಲಿ ಭಾರತದ ಕುರಿತು ಕೀಳಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಖರ್ಗೆ ನೀಡಿರುವ ಹೇಳಿಕೆಗೆ ಸಂಬAಧಿಸಿದAತೆ ಕಾಂಗ್ರೆಸ್‌ನ ಇತರ ನಾಯಕರು ತಮ್ಮ ನಿಲುವನ್ನು ಬಹಿರಂಗಪಡಿಸಬೇಕು. ಖರ್ಗೆ ಅವರ ವಿರುದ್ಧ ಪಕ್ಷದ ವತಿಯಿಂದ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ಜಿಲ್ಲಾ ವಕ್ತಾರ ತಳೂರು ಕಿಶೋರ್, ಜಿ.ಪಂ. ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ. ರವಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನು ಮಂಜುನಾಥ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ನಗರಸಭಾ ಅಧ್ಯಕ್ಷೆ ಕಲಾವತಿ, ಸದಸ್ಯರುಗಳಾದ ಕಾಳಚಂಡ ಅಪ್ಪಣ್ಣ, ಸತೀಶ್, ಶ್ವೇತಾ ಪ್ರಶಾಂತ್, ಸವಿತಾ ರಾಕೇಶ್, ಸಬಿತಾ, ಪ್ರಮುಖರಾದ ಮನು ಮಂಜುನಾಥ್, ಡಿಶು, ಸತೀಶ್ ಪೈ, ಬೊಳ್ಳಜಿರ ಅಯ್ಯಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.