ಕುಶಾಲನಗರ, ಅ. ೨೭: ಕುಶಾಲನಗರದ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣ ಹಿನ್ನೆಲೆಯಲ್ಲಿ ಲಾಡ್ಜ್ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಲಾಡ್ಜ್ ಮಾಲೀಕನನ್ನು ಬಂಧಿಸಿ ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.
ಕುಶಾಲನಗರದ ಬೈಪಾಸ್ ರಸ್ತೆಯಲ್ಲಿರುವ ರಾಯಲ್ ಇನ್ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ಅವ್ಯಾಹತವಾಗಿ ನಡೆಸುತ್ತಿರುವ ಮಾಹಿತಿ ಮೇರೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಡಿ ವೈ ಎಸ್ ಪಿ ಮೇದಪ್ಪ, ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್, ದಿನೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿದ್ದು ಈ ಸಂದರ್ಭ ವೇಶ್ಯಾವಾಟಿಕೆ ನಡೆಸುತ್ತಿರುವುದು ಖಚಿತಗೊಂಡಿದೆ.
೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಲಾಡ್ಜ್ನಲ್ಲಿ ಸ್ಥಳೀಯ ಮತ್ತು ಹೊರ ಜಿಲ್ಲೆಗಳ ಯುವತಿಯರನ್ನು ಸರಬರಾಜು ಮಾಡುವ ದಂಧೆ ನಡೆಸುತ್ತಿದ್ದ ಲಾಡ್ಜ್ ಮಾಲೀಕ ನಿತೇಶ್ ೩೫ ಎಂಬಾತನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ಲಾಡ್ಜ್ ನಲ್ಲಿದ್ದ ಯುವತಿ ಒಬ್ಬಳನ್ನು ರಕ್ಷಿಸಲಾಗಿದೆ. ಲಾಡ್ಜ್ ನಡೆಸುತ್ತಿದ್ದ ನಿತೇಶ್ ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಈ ದಂಧೆಯಲ್ಲಿ ತೊಡಗಿದ್ದು ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.