ಮಡಿಕೇರಿ ಅ. ೨೭: ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ಭಾವಚಿತ್ರವಿದ್ದ ಫ್ಲೆಕ್ಸ್ಗೆ ಹಾನಿ ಮಾಡಿರುವ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ತಾ.೨೬ ರಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಂದರ್ಭ ಶಾಸಕರ ಭಾವಚಿತ್ರವಿದ್ದ ಫ್ಲೆಕ್ಸ್ಅನ್ನು ಹರಿದು ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರು ಸಲ್ಲಿಸುವ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್.ಎ. ಹಂಸ, ಪ್ರಚಾರ ಸಮಿತಿ ಅಧ್ಯಕ್ಷ ವಿ.ಜಿ. ಮೋಹನ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕೋಚನ ಎಂ. ಚೇತನ್ ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಕೆ.ಆರ್, ಪ್ರಮುಖರಾದ ಯಶ್ ದೋಲ್ಪಾಡಿ, ಪ್ರಭು ರೈ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ, ನಗರ ಉಪಾಧ್ಯಕ್ಷ ಮುನೀರ್ ಮಾಚಾರ್, ಮಿನಾಜ್ ಪ್ರವೀಣ್, ಮಡಿಕೇರಿ ಯುವ ಘಟಕದ ಅಧ್ಯಕ್ಷ ಅರ್ಜುನ್ ಟಿ.ಆರ್, ಉಪಾಧ್ಯಕ್ಷ ಅನ್ಪಲ್, ಲೀಲಾ ಶೇಷಮ್ಮ, ಪೊನ್ನಕ್ಕ, ಧನಲಕ್ಷಿö್ಮ, ವಸಂತ ಭಟ್, ರವಿ ಪಾಪು, ನಜೀರ್ ಹುಸೇನ್, ಹಯಾತ್, ಹಬೀಬ್, ಸುಬ್ರಮಣಿ, ನಿರಂಜನ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.