ಮಡಿಕೇರಿ, ಅ. ೨೭: ಕಾಂಗ್ರೆಸ್ ಪಕ್ಷದಲ್ಲಿ ನೂತನ ವಾಗಿ ಬ್ಲಾಕ್ ಅಧ್ಯಕ್ಷರ ಆಯ್ಕೆ ಗಾಗಿ ಸಂಘಟನಾ ಸೃಜನ್ ಅಭಿಯಾನ -೨ ಹಮ್ಮಿಕೊಳ್ಳ ಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ಈ ಪ್ರಕ್ರಿಯೆ ಮುಕ್ತಾಯಗೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಹಿಂದೆ ಜಿಲ್ಲಾಧ್ಯಕ್ಷರ ಆಯ್ಕೆ ನಡೆದ ಮಾದರಿಯಲ್ಲೇ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕಗೊಳಿಸಲು ಪ್ರಕ್ರಿಯೆ ನಡೆದಿದೆ. ಕೆಪಿಸಿಸಿಯಿಂದ ನೇಮಕಗೊಂಡಿರುವ ವೀಕ್ಷಕರು ಪ್ರತಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ವ್ಯಾಪ್ತಿ ಯಲ್ಲಿ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಪ್ರಮುಖರ ಅಭಿಪ್ರಾಯವನ್ನು ಸಂಗ್ರಹಿಸಿ ಸಮರ್ಥ ರನ್ನು ಆಯ್ಕೆ ಮಾಡಲಿದ್ದಾರೆ. ಜಿಲ್ಲೆಯ ಸಚಿವರು ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ಪ್ರಕ್ರಿಯೆ ನಡೆಯಲಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮುಂಚೂಣಿ ಘಟಕದ ಅಧ್ಯಕ್ಷರುಗಳು ಹಾಗೂ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು. ಕೆಪಿಸಿಸಿ ನಿಯೋಜಿಸಿದ ವೀಕ್ಷಕರಾದ ಮಾಜಿ ಎಂಎಲ್‌ಸಿ ಆರ್. ವಿ ವೆಂಕಟೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮನಾಭ, ಮಮತಾ ಗಟ್ಟಿ ವೀಕ್ಷಕರಾಗಿ ಆಗಮಿಸಿದ್ದರು.

ವಯೋಮಿತಿ ಆಧಾರ ಹಾಗೂ ಅನುಭವವನ್ನು ಮಾನದಂಡವಾಗಿ ಪರಿಗಣಿಸಿಕೊಂಡು, ಸಾಮಾಜಿಕ ನ್ಯಾಯ ಒದಗಿಸುವುದರೊಂದಿಗೆ ಮಹಿಳೆಯರಿಗೂ ಪ್ರಾತಿನಿಧ್ಯ ನೀಡುವುದು ಎಐಸಿಸಿ ಹಾಗೂ ಕೆಪಿಸಿಸಿಯ ಉದ್ದೇಶವಾಗಿದೆ ಎಂದು ತಿಳಿಸಿರುವ ಧರ್ಮಜ ಉತ್ತಪ್ಪ, ಪಕ್ಷದ ಪ್ರಮುಖರು ಹಾಗೂ ಮುಂಚೂಣಿ ಘಟಕದ ಪ್ರಮುಖರು ಮತ್ತು ಕಾರ್ಯಕರ್ತರ ಅಭಿಪ್ರಾಯ ಪ್ರಮುಖವಾಗಲಿದೆ ಎಂದು ತಿಳಿಸಿದ್ದಾರೆ. ಇದು ಚುನಾವಣೆಯ ವರ್ಷವಾಗಿದ್ದು, ಮುಂಬರುವ ಗ್ರಾಮ ಪಂಚಾಯಿತಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಳಿಕ ನಡೆಯುವ ಪಟ್ಟಣ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ಗಮನದಲ್ಲಿರಿಸಿಕೊಂಡು ಈ ಎಲ್ಲಾ ಪ್ರಕ್ರಿಯೆ ನಡೆದಿದೆ. ಪಕ್ಷದಲ್ಲಿ ಎರಡನೇ ಸ್ಥರದ ನಾಯಕರಿಗೆ ಅವಕಾಶ ನೀಡುವ ಉದ್ದೇಶ ಹಾಗೂ ಮುಂಬರುವ ಎಲ್ಲಾ ಚುನಾವಣೆಗಳಿಗೆ ಪಕ್ಷ ಸಂಘಟನೆಯ ಗುರಿಯಲ್ಲಿ ಅಭಿಯಾನ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.