ಸೋಮವಾರಪೇಟೆ, ಅ. ೨೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಡಾ. ಅಂಬೇಡ್ಕರ್ ವಸತಿ ಶಾಲೆ ತೋಳೂರು ಶೆಟ್ಟಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾ. ೨೯ ರಂದು ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಾರ್ಷಿಕ ದತ್ತಿ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ಚೆರಿಯಮನೆ ದಿ. ಕೃಷ್ಣಪ್ಪ ಮರಗೋಡು ದತ್ತಿ, ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಅಶ್ರಣ್ಣ ಸ್ಮಾರಕ ದತ್ತಿ, ಎಸ್.ಎಸ್. ರಾಮಮೂರ್ತಿ ದತ್ತಿ ಕಾರ್ಯಕ್ರಮಗಳು ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ತಿಳಿಸಿದ್ದಾರೆ.
ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್, ಡಾ. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಭಾಗವಹಿಸಲಿದ್ದಾರೆ.
೬ನೇ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಅಧ್ಯಕ್ಷೆ ಜಲಾ ಕಾಳಪ್ಪ ಹಾಗೂ ಧರ್ಮ ಗುರುಗಳಾದ ಶಾಫಿ ಸಅದಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.