ಶನಿವಾರಸAತೆ: ಅ. ೨೭: ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ೬ ಮತ್ತು ೭ ನೇ ತರಗತಿಯ ವಿದ್ಯಾರ್ಥಿಗಳಿಂದ ಸಂತೆ ಮಾರುಕಟ್ಟೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂತೆ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳು ತಮ್ಮತಮ್ಮ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಬಗೆಬಗೆಯ ಸೊಪ್ಪು, ವಿವಿಧ ತರಕಾರಿಗಳು, ಹಣ್ಣುಹಂಪಲು ಹಾಗೂ ಮನೆಯಲ್ಲೇ ತಯಾರಿಸಿದ ಸಿಹಿ-ಖಾರ ತಿಂಡಿ-ತಿನಿಸುಗಳನ್ನು ತಂದಿದ್ದು; ಉತ್ಸಾಹದಿಂದ ಮಾರಾಟ ಮಾಡಿದರು. ಪೋಷಕರು ಸಂತೆ ಮಾರುಕಟ್ಟೆಯಲ್ಲಿ ಚೌಕಾಸಿ ಮಾಡುತ್ತಾ ಮಕ್ಕಳಿಂದ ತರಕಾರಿಗಳನ್ನು ಖರೀದಿಸಿ ಸಂಭ್ರಮಿಸಿದರು.

ವಿದ್ಯಾಸAಸ್ಥೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ ಮಾತನಾಡಿ, ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನವನ್ನು ಹೆಚ್ಚಿಸುವ ಉದ್ದೇಶದಿಂದ ಹಾಗೂ ಹಣದ ಮೌಲ್ಯದ ಅರಿವು ಮೂಡಿಸಲು ಮಾರುಕಟ್ಟೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.