ಮಡಿಕೇರಿ, ಅ. ೨೮; ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಹನಾ ಎಸ್. ಹಾದಿಮನಿ ಹಾಗೂ ಉಪವಿಭಾಗಾಧಿಕಾರಿಯಾಗಿದ್ದ ನಿತಿನ್ ಚಕ್ಕಿ ಅವರುಗಳನ್ನು ಸರಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಅಪರ ಜಿಲ್ಲಾಧಿಕಾರಿ ಸ್ಥಾನಕ್ಕೆ ಮಂಗಳೂರು ಜಿ.ಪಂ. ಉಪಕಾರ್ಯದರ್ಶಿಯಾಗಿದ್ದ ಜಯಲಕ್ಷಿö್ಮ ಅವರನ್ನು ನೇಮಕ ಮಾಡಲಾಗಿದ್ದು, ಉಪವಿಭಾಗಾಧಿಕಾರಿ ಸ್ಥಾನಕ್ಕೆ ಗದಗ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿದ್ದ ಬಸನಗೌಡ ಕೋಟುರ ಅವರನ್ನು ನೇಮಕ ಮಾಡಲಾಗಿದೆ.
ನಿತಿನ್ ಚಕ್ಕಿ ಅವರನ್ನು ರಾಮನಗರ ಉಪವಿಭಾಗಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.