ಮಡಿಕೇರಿ, ಅ. ೨೮: ಕೂರ್ಗ್ ಸ್ಕೂಲ್ ಆಫ್ ಚೆಸ್ ಸಂಸ್ಥೆ ವತಿಯಿಂದ ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ಸಹಯೋಗದೊಂದಿಗೆ ನವೆಂಬರ್ ೧೫ ರಂದು ಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್ಶಿಪ್ ಕ್ರೀಡಾಕೂಟವನ್ನು ಸಿದ್ದಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ತರಬೇತುದಾರ ಮಣಿ ತಿಳಿಸಿದ್ದಾರೆ.
ಎಸ್.ಎನ್.ಡಿ.ಪಿ ಯೂನಿಯನ್ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಿದ್ದಾಪುರ ವ್ಯಾಪ್ತಿಯಲ್ಲೂ ಚೆಸ್ ಕ್ರೀಡೆಯನ್ನು ಬೆಳೆಸುವ ನಿಟ್ಟಿನಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ ಎಂದರು.
ಎಸ್.ಎನ್.ಡಿ.ಪಿ. ಸಭಾಂಗಣದಲ್ಲಿ ನಡೆಯಲಿರುವ ಈ ಕ್ರೀಡಾಕೂಟವು ೫ ವಿಭಾಗಗಳಲ್ಲಿ ನಡೆಯಲಿದೆ. ಅಂಡರ್-೭, ಅಂಡರ್-೯, ಅಂಡರ್-೧೨, ಅಂಡರ್-೧೫ ಹಾಗೂ ೧೫ ವರ್ಷ ಮೇಲ್ಪಟ್ಟವರಿಗೆ ಓಪನ್ ಕೆಟಗರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಜಿಲ್ಲೆಯ ಆಸಕ್ತ ಚೆಸ್ ಆಟಗಾರರು ತಮ್ಮ ಹೆಸರನ್ನು ನವೆಂಬರ್ ೧೩ ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ೮೮೬೧೨೧೭೪೯೧, ೯೧೦೮೧೭೦೧೨೮ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ಚಿನ್ಮಿತ್, ಬ್ಲೆöÊಂಡ್ ಗೇಮ್ ಆಡಿ ಸಾಧನೆ ಮಾಡುವ ಮೂಲಕ ಏಷ್ಯನ್ ಬುಕ್ ಆಫ್ ರೆಕಾರ್ಡ್ ಹಾಗೂ ಇಂಡಿಯನ್ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಸುದ್ದಿಗೋಷ್ಠಿಯಲ್ಲಿ ರಾಜ, ಕವಿರಾಜು, ಪ್ರಭು, ಧನ್ವಿತ್ ಉಪಸ್ಥಿತರಿದ್ದರು.