ಪೊನ್ನಂಪೇಟೆ, ಅ. ೨೮: ಸಂಸ್ಕೃತದಲ್ಲಿ ೨೪ ಸಾವಿರ ಶ್ಲೋಕಗಳಿರುವ ರಾಮಾಯಣ ರಚಿಸುವ ಮೂಲಕ ಈ ದೇಶದ ಮೊದಲ ಮಹಾಕಾವ್ಯ ನೀಡಿದ ಮೊದಲ ಕವಿ ಮಹರ್ಷಿ ವಾಲ್ಮೀಕಿ ಎಂದು ಪೊನ್ನಂಪೇಟೆ ಸಿಐಪಿಯು ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಶ್ಮಿತಾ ಹೇಳಿದರು.
ತಾಲೂಕು ಆಡಳಿತ, ತಾ.ಪಂ, ಪುರಸಭೆ, ಪಟ್ಟಣ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮುಖ್ಯ ಭಾಷಣ ಮಾಡಿದ ಅವರು, ರಾಮನ ಪಿತೃವಾಕ್ಯ ಪರಿಪಾಲನೆ, ಭರತ-ಲಕ್ಷö್ಮಣರ ಸಹೋದರತ್ವ, ಸೀತೆಯ ಪತಿವ್ರತಾ ಧರ್ಮದ ಮೂಲಕ ವಾಲ್ಮೀಕಿ ಜಗತ್ತಿಗೆ ಉತ್ತಮ ಸಂದೇಶ ನೀಡಿದ್ದಾರೆ. ರಾಮಾಯಣದ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ತಪ್ಪು ಮಾಡಿದವರು ತಪ್ಪು ತಿದ್ದಿಕೊಂಡು ಸನ್ಮಾರ್ಗದಲ್ಲಿ ಬದುಕನ್ನು ಸುಂದರಗೊಳಿಸಿಕೊಳ್ಳಬಹುದು ಎಂಬುದನ್ನು ವಾಲ್ಮೀಕಿ ಜೀವನ ತೋರಿಸುತ್ತದೆ ಎಂದರು.
ಸAಘದ ಅಧ್ಯಕ್ಷ ಪಿ.ಟಿ. ಸುರೇಶ್ ಮಾತನಾಡಿ, ಶಾಸಕ ಎ.ಎಸ್. ಪೊನ್ನಣ್ಣ ಅವರು ವಾಲ್ಮೀಕಿ ಭವನಕ್ಕೆ ೧ ಕೋಟಿ ರೂ. ಭರವಸೆ ನೀಡಿದ್ದಾರೆ. ಆದರೆ ನಿವೇಶನದ ಕೊರತೆಯಿಂದ ಯೋಜನೆ ನನೆಗುದಿಗೆ ಬಿದ್ದಿದೆ. ತಹಶೀಲ್ದಾರ್ ಸಂಜನಾ ಸಿ.ಎಸ್. ಅವರು ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು. ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು ಎಂದರು.
ಕಾರ್ಯದರ್ಶಿ ಮುತ್ತುರಾಜ್ ಮಾತನಾಡಿ, ಇಲಾಖೆ ಕಚೇರಿಗಳಿಗೆ ಬರುವ ಮುಗ್ಧ ಕಾರ್ಮಿಕರ ಕೆಲಸವನ್ನು ಅಧಿಕಾರಿಗಳು ಸತಾಯಿಸದೆ ಮಾಡಿಕೊಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್ ಮಾತನಾಡಿ, ಜಯಂತಿಗಳನ್ನು ಆಚರಣೆಗೆ ಸೀಮಿತಗೊಳಿಸದೆ ಆದರ್ಶಗಳನ್ನು ಅರ್ಥ ಮಾಡಿಕೊಳ್ಳಬೇಕು. ಸರ್ಕಾರಿ ಅಧಿಕಾರಿಗಳು ಸಮುದಾಯದ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ತಮ್ಮ ಆಚಾರ-ವಿಚಾರ ಹಾಗೂ ಹಕ್ಕುಗಳನ್ನು ಸಮರ್ಥವಾಗಿ ಮಂಡಿಸಲು ಸಮುದಾಯದಲ್ಲಿ ಒಗ್ಗಟ್ಟು ಮತ್ತು ಗಟ್ಟಿ ನಾಯಕತ್ವ ಬೆಳೆಸಿಕೊಳ್ಳಬೇಕು. ಸಮುದಾಯದ ಜನ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ಡಾ. ಸುಶ್ಮಿತಾ, ಪಿ.ಟಿ. ಸುರೇಶ್, ಕವನ್ ನಾಯಕ್, ಜೆ.ಕೆ. ರಾಮು, ಪಿ.ಸಿ. ಪಾಪಣ್ಣ, ರಾಜೇಶ್, ಶಿಕ್ಷಕಿ ಉಮಾ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಬಸವೇಶ್ವರ ದೇವಸ್ಥಾನದಿಂದ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಿತು.
ಈ ಸಂದರ್ಭ ಪೊನ್ನಂಪೇಟೆ ತಹಶೀಲ್ದಾರ್ ಹಾಗೂ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಸಂಜನಾ ಸಿ.ಎಸ್, ತಾಲೂಕು ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ತೇಜರಾಜ್ ಹಲಸಬಾಳ, ವೀರಾಜಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೆ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗೋಪಿ ಎಸ್, ವೀರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪಂಕಜ, ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಹಾಗೂ ಶಿಕ್ಷಕ ಮಹೇಶ್, ನಾಗರಹೊಳೆ ವನಧನ ವಿಕಾಸ ಕೇಂದ್ರದ ಅಧ್ಯಕ್ಷೆ ಪುಷ್ಪಾ , ಸಿಡಿಪಿಒ ಪೂಣಚ್ಚ, ಬೆಟ್ಟಕುರುಬ ಜನಾಂಗದ ಮುಖಂಡ ಪಾಪಣ್ಣ, ವೀರಾಜಪೇಟೆ ತಾಲೂಕು ಬುಡಕಟ್ಟು ಕೃಷಿಕ ಸಂಘದ ಅಧ್ಯಕ್ಷ ಸಿದ್ದಪ್ಪ, ಕೆಪಿಎಸ್ ಶಾಲಾ ಉಪಪ್ರಾಂಶುಪಾಲ ಚಂಗಪ್ಪ, ಆದಿವಾಸಿ ಮುಖಂಡರಾದ ಜೆ.ಕೆ. ರಾಮು, ಕಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೊಮ್ಮಾಡು ಆಶ್ರಮ ಶಾಲೆ ಶಿಕ್ಷಕರು ನಾಡಗೀತೆ ಹಾಗೂ ವಂದೇ ಮಾತರಂ ಗೀತೆಯನ್ನು ಹಾಡಿದರು. ಶಿಕ್ಷಕಿ ಚೈತ್ರಾ ಪ್ರಾರ್ಥಿಸಿದರು. ಬೊಮ್ಮಾಡು ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.