ಮಡಿಕೇರಿ, ಅ. ೨೯: ಮಡಿಕೇರಿ ನಗರ ವ್ಯಾಪ್ತಿಯಲ್ಲಿ ರೆಂಟಲ್ ಬೈಕ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಓಡಾಟದಿಂದಾಗಿ ಆಟೋ ಚಾಲಕರು ಹಾಗೂ ಪ್ರವಾಸಿ ವಾಹನಗಳ - ಚಾಲಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಾ. ೩೦ ರಂದು (ಇಂದು) ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಆಟೋ ಹಾಗೂ ಪ್ರವಾಸಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಸಂಬAಧಿಸಿದ ಸಂಘಟನೆಗಳು ನಿರ್ಧರಿಸಿವೆ.
‘ಶಕ್ತಿ’ಯೊಂದಿಗೆ ಮಾತನಾಡಿದ ಮಡಿಕೇರಿ ನಗರ ಆಟೋ ಚಾಲಕರ ಸಂಘದ ಗೌರವಾಧ್ಯಕ್ಷ ಮೇದಪ್ಪ, ಮಡಿಕೇರಿ ನಗರ ವ್ಯಾಪ್ತಿಯಲ್ಲಿ ರೆಂಟಲ್ ಬೈಕ್ ಹಾಗೂ ರ್ಯಾಪಿಡೋ ಬೈಕ್ ಓಡಾಟದಿಂದ ಆಟೋ ಚಾಲಕರು ನಷ್ಟ ಅನುಭವಿಸುವಂತಾಗಿದೆ. ಅತೀ ಕಡಿಮೆ ದರಕ್ಕೆ ಈ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯುವುದರಿಂದಾಗಿ ಆಟೋ ಬಾಡಿಗೆಯನ್ನೇ ನಂಬಿಕೊAಡು ಬದುಕುತ್ತಿರುವ ಆಟೋ ಚಾಲಕರು ಹಾಗೂ ಮಾಲೀಕರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಅಲ್ಲದೆ ರ್ಯಾಪಿಡೋ ಹಾಗೂ ರೆಂಟಲ್ ಬೈಕ್ಗಳು ನಿಯಮಗಳನ್ನು ಮೀರಿ ಕಾರ್ಯಾಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ತಾ. ೩೦ ರಂದು (ಇಂದು) ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಆಟೋಗಳ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋಗಳ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ಎ.ವಿ. ಶಾಲೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಮೇದಪ್ಪ ಮಾಹಿತಿ ನೀಡಿದ್ದಾರೆ.
ಮಡಿಕೇರಿ ಪ್ರವಾಸಿ ವಾಹನಗಳ ಮಾಲೀಕರು ಹಾಗೂ ಚಾಲಕರ ಸಂಘ ಕೂಡ ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಪ್ರವಾಸಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಿದೆ. ಈಗಾಗಲೇ ಬುಕ್ಕಿಂಗ್ ಆಗಿರುವ ವಾಹನಗಳು ಮಾತ್ರ ಸಂಚರಿಸಲಿದ್ದು, ಉಳಿದಂತೆ ಎಲ್ಲಾ ಪ್ರವಾಸಿ ವಾಹನಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಸಂಘದ ಅಧ್ಯಕ್ಷ ವೀರೇಂದ್ರಗೌಡ ತಿಳಿಸಿದ್ದಾರೆ.ರ್ಯಾಪಿಯೋ ಬೈಕ್ ಹಾಗೂ ರೆಂಟಲ್ ಬೈಕ್ಗಳ ಓಡಾಟದಿಂದ ಪ್ರವಾಸಿ ವಾಹನಗಳ ಚಾಲಕರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರ ಸಂಘದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದು ಕಾವೇರಿ ವಾಹನ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಪೊನ್ನಪ್ಪ (ದಿನೇಶ್) ತಿಳಿಸಿದ್ದಾರೆ. ಆಟೋ ಚಾಲಕರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರವಾಸಿ ವಾಹನಗಳ ಸಂಚಾರವನ್ನು ಕೂಡ ಬೆಳಿಗ್ಗೆ ೬ ರಿಂದ ಸಂಜೆ ೬ ಗಂಟೆಯವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಕಾಫಿನಾಡು ಪ್ರವಾಸಿ ವಾಹನಗಳ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಮಹೇಂದ್ರ ತಿಳಿಸಿದ್ದಾರೆ.