ಸಿದ್ದಾಪುರ, ಅ. ೨೯: ಕಾರ್ಮಿಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಡಗ -ಬಾಣಂಗಾಲ ಗ್ರಾಮದ ಚೌಡಿಕಾಡು ಕಾಫಿ ತೋಟದಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ಶ್ರಿಜೇಶ್ (೪೫) ಎಂಬಾತ ಖಾಸಗಿ ಸಂಸ್ಥೆಗೆ ಸೇರಿದ ಕಾಫಿ ತೋಟದಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು, ತೋಟದಲ್ಲಿದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶ್ರಿಜೇಶ್‌ನ ಮಗ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಕೆರೆಯಿಂದ ಮೃತ ದೇಹವನ್ನು ಹೊರತೆಗೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮೃತರ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಲಾಯಿತು.