ಮಡಿಕೇರಿ, ಅ. ೨೯: ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕ, ಮಹಿಳಾ ಘಟಕ ಹಾಗೂ ಸಮಸ್ತ ಕುಲಾಲ ಕುಂಬಾರ ಕುಲಬಾಂಧವರು ಮಡಿಕೆಬೀಡು, ಮಾಯಮುಡಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ-೨೦೨೬ರ ಸೀಸನ್-೨ ಆಯೋಜಿಸಲಾಗಿದೆ. ಪಂದ್ಯಾವಳಿ ತಾ.೩೧ ಮತ್ತು ನ. ೧ ರಂದು ಮಾಯಮುಡಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ದಾಮೋದರ್ ಅಧ್ಯಕ್ಷತೆಯಲ್ಲಿ ತಾ. ೩೧ರಂದು ಬೆಳಿಗ್ಗೆ ೮ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕರ್ನಾಟಕ ಸರ್ಕಾರದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ.
ಸಂಸದ ಯದುವೀರ್ ಒಡೆಯರ್, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ, ಸಂಘದ ಮಾಜಿ ಅಧ್ಯಕ್ಷ ಎಂ.ಡಿ. ನಾಣಯ್ಯ, ಕುಶಾಲಪ್ಪ ಮೂಲ್ಯ, ಮಾಯಮುಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ.ಎಸ್. ಟಾಟು ಮೊಣ್ಣಪ್ಪ, ಜಿ.ಪಂ. ಮಾಜಿ ಸದಸ್ಯ ಬಿ.ಎನ್. ಪ್ರಥ್ಯು, ಕಾಫಿ ಬೆಳೆಗಾರÀ ಕಿಟ್ಟು ಅಯ್ಯಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಮಾಯಮುಡಿಯ ಮಾಜಿ ಅಧ್ಯಕ್ಷ ಎಸ್.ಎಸ್. ಸುರೇಶ್, ಕಾಫಿ ಬೆಳೆಗಾರ ಸಿ.ಕೆ. ಪ್ರದೀಪ್ (ಧನುಗಾಲ), ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷÀ ಎ.ಎ. ಬೋಪಣ್ಣ, ಕಾಫಿ ಬೆಳೆಗಾರರಾದ ಎ.ಸಿ. ಪ್ರದೀಪ್, ಸಣ್ಣುವಂಡ ಎಂ.ಸುರೇಶ್, ಎ.ಎಸ್. ನಾಚಯ್ಯ ಹಾಗೂ ಮಾಚಿಮಾಡ ನಂದ ಪಾಲ್ಗೊಳ್ಳಲಿದ್ದಾರೆ.
ನ. ೧ರಂದು ಬೆಳಿಗ್ಗೆ ೯ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ದಾಮೋದರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕಾಫಿ ಬೆಳೆಗಾರರಾದ ಕೆ.ಎಂ. ಗಣಪತಿ, ಕೆ.ಟಿ. ಬಿದ್ದಪ್ಪ, ಕೆ.ಸಿ. ಸುಧೀರ್, ಎಸ್.ಎಂ. ವಿಶ್ವನಾಥ್, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಉಪಾಧ್ಯಕ್ಷರಾದ ಸುರೇಶ್ ಕುಲಾಲ್, ಸಂಘದ ಮಾಜಿ ಕಾರ್ಯದರ್ಶಿ ಅರುಣ್ ಕುಲಾಲ್, ಮಡಿಕೆಬೀಡು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಆರ್. ಚಂದ್ರ, ಮಡಿಕೆಬೀಡು ಕುಂಬಾರ ಕುಲಾಲ ಸಂಘದ ಅಧ್ಯಕ್ಷ ಕೆ.ಎನ್. ಶಿವು, ಮಾಯಮುಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಕೆ.ಆರ್. ಶ್ರೀನಿವಾಸ್, ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಆರ್. ರಮೇಶ್, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ, ಯುವ ಘಟಕದ ಅಧ್ಯಕ್ಷ ಜಿ.ಪಿ. ಕುಲಾಲ್ ಹಾಗೂ ವೀರಾಜಪೇಟೆಯ ಎಲ್ಐಸಿ ವ್ಯವಸ್ಥಾಪಕÀ ಮಧುಸೂದನ್ ಭಾಗವಹಿಸಲಿದ್ದಾರೆ.