ಸೋಮವಾರಪೇಟೆ, ಅ. ೨೯ : ಇಲ್ಲಿನ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ, ಪುನೀತ್ ರಾಜ್ಕುಮಾರ್ ಅವರ ಐದನೇ ವರ್ಷದ ಪುಣ್ಯ ಸ್ಮರಣೆಗಾಗಿ ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಸಿಹಿ ವಿತರಣೆ ಹಾಗೂ ಅನ್ನದಾನ ನಡೆಯಿತು.
ಅಪ್ಪು ಅಭಿಮಾನಿ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಜಮೀರ್ ಅಹ್ಮದ್, ಮತ್ತು ದಾದಿಯರು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಯಡೂರು, ಕರವೇ ನಗರಾಧ್ಯಕ್ಷ ಬಿ.ಎಸ್. ಮಂಜುನಾಥ್, ಶೇಖರ್ ಜಗನ್ನಾಥ್, ವೆಂಕಟೇಶ್, ಮನು, ರಾಮಕೃಷ್ಣ, ಗಿರೀಶ್, ಅಂತೋಣಿ, ವಸಂತ ಹಾಗೂ ನಂದೀಶ್ ಉಪಸ್ಥಿತರಿದ್ದರು.