ಗೋಣಿಕೊಪ್ಪ, ಅ. ೨೯: ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಪೊನ್ನಂಪೇಟೆ ವಕೀಲರ ಸಂಘದ ವತಿಯಿಂದ ಪೊನ್ನಂಪೇಟೆ ನ್ಯಾಯಾಂಗ ಸಂಕೀರ್ಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನಾ ಕಾರ್ಯಕ್ರಮ ತಾ. ೩೧ರಂದು ನಡೆಯಲಿದೆ.
ಬೆಳಗ್ಗೆ ೧೧ ಗಂಟೆಗೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅಜ್ಜಿಕುಟ್ಟೀರ ಎಸ್. ಬೋಪಣ್ಣ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಂ. ಜಿ. ಶುಖುರ್ ಕಮಲ್ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದಾರೆ.
ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕೊಡಗು ಆಡಳಿತಾತ್ಮಕ ನ್ಯಾಯಾಧೀಶರಾದ ಎಸ್. ರಾಚಯ್ಯ ಅಧ್ಯಕ್ಷತೆ ವಹಿಸಲಿದ್ದು, ಉಚ್ಚ ನ್ಯಾಯಾಲಯ ನ್ಯಾಯಾಧೀಶರುಗಳಾದ ಸಿ.ಎಂ. ಪೂಣಚ್ಚ, ಕೆ.ಜಿ. ಶಾಂತಿ, ಕೆ.ಎಸ್. ಭರತ್ ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ, ವಕೀಲ ಸುರೇಶ್ ಅಯ್ಯಪ್ಪ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಾರುತಿ ಎಸ್ ಬಗಡೆ, ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷ ಮಲ್ಲಂಗಡ ಜಿ. ರಾಕೇಶ್, ಕಾರ್ಯದರ್ಶಿ ಗಿರೀಶ್ ಅಣ್ಣಯ್ಯ ಭಾಗವಹಿಸಲಿದ್ದಾರೆ.