ಮಡಿಕೇರಿ, ಅ. ೨೯: ಸಹಕಾರ ಭಾರತಿ ಕೊಡಗು ಘಟಕದ ಅಭ್ಯಾಸ ವರ್ಗ ಕಾರ್ಯಕ್ರಮ ತಾ. ೩೧ ರಂದು ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಜರುಗಲಿದೆ. ಸಹಕಾರ ಭಾರತಿ ರಾಜ್ಯಾಧ್ಯಕ್ಷ ಪ್ರಭುದೇವ ಮಗನೂರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಕ್ಷ ವಾಂಚಿರ ಅಜಯ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಧ್ಯ ಕೇಂದ್ರೀಯ ಸಂಪರ್ಕ ಪ್ರಮುಖ್ ಸತೀಸ್ ಚಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕಾಮತ್, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ತುಮಕೂರು, ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಉಪಸ್ಥಿತರಿರುವರು.