ಮಡಿಕೇರಿ, ಅ. ೩೦: ಪೂರ್ವನಿಗದಿತ ಕಾರ್ಯಕ್ರಮದ ನಿಮಿತ್ತ ಕೊಡಗು ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ನಗರದ ಹೊರವಲಯದ ಖಾಸಗಿ ರೆಸಾರ್ಟ್ನ ಹೆಲಿಪ್ಯಾಡ್‌ನಲ್ಲಿ ಸನ್ಮಾನಿಸಿ, ಸ್ವಾಗತಿಸಿದರು.

ಬಳಿಕ ಲೋಕೋಪಯೋಗಿ ಇಲಾಖೆಗೆ ಸಂಬAಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.