ಮಡಿಕೇರಿ, ಅ. ೩೦ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆ ಸಂಸ್ಥಾನ ಒಟ್ಟಾಗಿ ನವೆಂಬರ್ ೧, ೧೯೮೫ ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.

ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟಿçÃಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು. ನೋಂದಣಿ ತರು ಶುಲ್ಕವನ್ನು ಕೊಡಬೇಕಾಗಿಲ್ಲ.

ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊAಡು ಉತ್ತೀರ್ಣ ರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆ ಸಿಅಸುಇ ೩೯:ಸೆಸೆವಿ: ೮೭(೧), ದಿನಾಂಕ ೧೩ನೇ ಫೆಬ್ರವರಿ ೧೯೮೯ (ಕರ್ನಾಟಕ ರಾಜ್ಯಪತ್ರ ಭಾಗ-೪, ೨ಸಿ(೧).ಮಾರ್ಚ್ ೨೩, ೧೯೮೯, ಪುಟ ೧೧೯)ರಲ್ಲಿ ತಿಳಿಸಿರುವಂತೆ ವಿನಾಯಿತಿಯಿದೆ.

ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರಬೇಕು ಹಾಗೂ ವಯೋಮಿತಿ ೧೮ ರಿಂದ ೫೦ ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ ೨೫೦/- ಡಿಮ್ಯಾಂಡ್ ಡ್ರಾಫ್ಟ್ನ್ನು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ನಲವತ್ತನೆಯ ತಂಡದ ತರಬೇತಿಯು ಜನವರಿ ೨೦೨೭ ರಿಂದ ಆರಂಭವಾಗುತ್ತದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆ ಸಂಸ್ಥಾನ, ಮಾನಸಗಂಗೋತ್ರಿ, ಮೈಸೂರು-೫೭೦೦೦೬, ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ಡಿಸೆಂಬರ್ ೩೧, ೨೦೨೬ ಒಳಗೆ ತಲುಪಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.೦೮೨೧-೨೩೫೧೨೮ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.