ಮಡಿಕೇರಿ, ಅ. ೩೦: ಪೊನ್ನಂಪೇಟೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶರ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮವು ತಾ. ೩೧ ರಂದು ಬೆಳಿಗ್ಗೆ ೧೧ ಗಂಟೆಗೆ ಪೊನ್ನಂಪೇಟೆಯ ಕೋರ್ಟ್ ಆವರಣದಲ್ಲಿ ನಡೆಯಲಿದೆ.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರಾದ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಎ.ಎಸ್.ಬೋಪಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾದ ಎಂ.ಜಿ.ಶುಕುರೆ ಕಮಲ್ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಹೈಕೋರ್ಟ್ನ ನ್ಯಾಯಾಧೀಶರಾದ ಎಸ್.ರಾಚಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ, ವಿಶೇಷ ಆಹ್ವಾನಿತರಾಗಿ ಹೈಕೋರ್ಟ್ನ ನ್ಯಾಯಾಧೀಶರಾದ ಸಿ.ಎಂ.ಪೂಣಚ್ಚ, ಕೆ.ಜಿ.ಶಾಂತಿ, ಕೆ.ಎಸ್.ಭರತ್ ಕುಮಾರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ವಕೀಲ ಎಂ.ಸುರೇಶ್ ಅಯ್ಯಪ್ಪ ಭಾಗವಹಿಸಲಿದ್ದಾರೆ.
ಕೊಡಗು ಜಿಲ್ಲಾ ಪ್ರಧಾನ ಮತ್ತು ಸೆಷನ್ ನ್ಯಾಯಾಧೀಶರಾದ ಮಾರುತಿ ಎಸ್. ಬಗಡೆ, ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷ ಎಂ.ಜಿ.ರಾಕೇಶ್, ಕಾರ್ಯದರ್ಶಿ ಗಿರೀಶ್ ಅಣ್ಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.