ಮಡಿಕೇರಿ, ಅ. ೩೦: ಹಿರಿಯರು ಸಂತಸದಿAದ ಇರುವ ಮನೆ ಹಾಗೂ ಸಮಾಜ ಉತ್ತಮವಾಗಿರಲು ಸಾಧ್ಯ. ಆದ್ದರಿಂದ ಹಿರಿಯರನ್ನು ಗೌರವಿಸುವುದರ ಜೊತೆಗೆ, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದರು.

ಭಾರತ ಸರ್ಕಾರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಕರ್ನಾಟಕ ಸರ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-೨೦೦೭ ರ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ “ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ” ಎಂಬ ಉದಾತ್ತ ಪರಂಪರೆಯಿದೆ. ಹಿರಿಯರಿಗೆ ದೊರೆಯಬೇಕಾದ ಆಸ್ತಿ ಹಕ್ಕುಗಳು ಮತ್ತು ನಿರ್ವಹಣಾ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಇಂದಿನ ‘ಜೆನ್ ಝಿ’ ಯುವ ಪೀಳಿಗೆಗೆ ಕೇವಲ ಉಪದೇಶ ಅಥವಾ ಭಾಷಣಗಳ ಮೂಲಕ ಮಾರ್ಗದರ್ಶನ ನೀಡಲು ಸಾಧ್ಯವಿಲ್ಲ. ಅವರ ಮನೋಭಾವವನ್ನು ಅರ್ಥಮಾಡಿಕೊಂಡು, ಸೂಕ್ತ ವಿಧಾನಗಳ ಮೂಲಕ ಸಂವಹನ ನಡೆಸಬೇಕು. ಹಿರಿಯರ ಅನುಭವ ಮತ್ತು ಅವರು ತೋರಿಸಿಕೊಟ್ಟ ಮಾರ್ಗದ ಮಹತ್ವವನ್ನು ಯುವಜನರು ಅರಿತುಕೊಳ್ಳಬೇಕು ಎಂದು ಹೇಳಿದರು.

ಮಡಿಕೇರಿ ಮಹಿಳಾ ಠಾಣೆಯ ಸಿಪಿಐ ಉಮೇಶ್ ಕುಮಾರ್ ಅವರು ಮಾತನಾಡಿ, ಹಿರಿಯ ನಾಗರಿಕರ ಸುರಕ್ಷತೆ ಮತ್ತು ರಕ್ಷಣೆಗೆ ಪೊಲೀಸ್ ಇಲಾಖೆ ವತಿಯಿಂದ ಬೀಟ್ ವ್ಯವಸ್ಥೆಯ ಮೂಲಕ ನಿಗಾ ವಹಿಸಲಾಗುತ್ತಿದ್ದು, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ ಪೊಲೀಸ್ ನೆರವು ಪಡೆಯಬಹುದು ಎಂದು ತಿಳಿಸಿದರು. ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಸಂಬAಧಿಸಿದAತೆ ಯಾವುದೇ ಸಮಸ್ಯೆ ಅಥವಾ ತೊಂದರೆ ಎದುರಾದಲ್ಲಿ ೧೦೯೦ ಅಥವಾ ೧೦೯ ಸಹಾಯವಾಣಿಗಳ ಮೂಲಕ ನೆರವು ಕೋರಬಹುದು. ತುರ್ತು ಸಂದರ್ಭದಲ್ಲಿ ೧೧೨ ಸಂಖ್ಯೆಗೆ ಕರೆ ಮಾಡಿ ಪೊಲೀಸ್ ಸಹಾಯ ಪಡೆಯಬಹುದು ಎಂದು ತಿಳಿಸಿದರು.

ವಕೀಲರಾದ ಮೀನಾ ಕುಮಾರಿ ಅವರು ಮಾತನಾಡಿ, ಕಾನೂನು ಅನುಷ್ಠಾನದಲ್ಲಿ ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಪರಿಣಾಮಗಳ ಕುರಿತು ಮಾತನಾಡಿ, ಹಿರಿಯ ನಾಗರಿಕರ ಪಾಲನೆ, ಪೋಷಣೆ ಮತ್ತು ನಿರ್ವಹಣೆ ಮಾಡುವುದು ಮಕ್ಕಳ ಕಾನೂನುಬದ್ಧ ಜವಾಬ್ದಾರಿಯಾಗಿದೆ. ನಿರ್ವಹಣೆ ಎಂದರೆ ಕೇವಲ ಊಟ ನೀಡುವುದು ಮಾತ್ರವಲ್ಲ, ಹಿರಿಯ ನಾಗರಿಕರಿಗೆ ಅಗತ್ಯವಾದ ಬಟ್ಟೆ, ಸುರಕ್ಷಿತ ವಸತಿ, ವೈದ್ಯಕೀಯ ಆರೈಕೆ ಹಾಗೂ ಸೂಕ್ತ ಚಿಕಿತ್ಸೆಯನ್ನು ಒದಗಿಸುವುದೂ ಇದರ ಭಾಗವಾಗಿದೆ ಎಂದರು.

ಹಿರಿಯ ನಾಗರಿಕರ ಪಾಲನೆ ಮತ್ತು ನಿರ್ವಹಣೆಗೆ ಸಂಬAಧಿಸಿದAತೆ ಕಾನೂನಿನಲ್ಲಿ ನಿರ್ದಿಷ್ಟ ಜವಾಬ್ದಾರಿಗಳನ್ನು ವಿಧಿಸಲಾಗಿದೆ. ಹಿರಿಯರು ತಮ್ಮ ಜೀವನ ನಿರ್ವಹಣೆಗೆ ಅಗತ್ಯವಾದ ಸೌಲಭ್ಯಗಳಿಂದ ವಂಚಿತರಾಗದAತೆ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ. ಅವರನ್ನು ಗೌರವಯುತವಾಗಿ ಹಾಗೂ ಸುರಕ್ಷಿತವಾಗಿ ಬದುಕಲು ಅಗತ್ಯವಾದ ಆರೈಕೆ ಮತ್ತು ನಿರ್ವಹಣೆ ದೊರೆಯಬೇಕು. ಅವರ ಹಕ್ಕುಗಳ ರಕ್ಷಣೆಗಾಗಿ ಕಾನೂನಿನ ಅರಿವು ಹೊಂದಿರುವುದು ಅಗತ್ಯವಾಗಿದೆ ಎಂದು ಮೀನ ಕುಮಾರಿ ಅವರು ಹೇಳಿದರು.

ಪ್ರಕರಣಗಳ ಅಧ್ಯಯನ ಕುರಿತು ಮಾತನಾಡಿದ ವಕೀಲ ಮನೋಜ್ ಬೋಪಯ್ಯ ಅವರು, ಆಧುನಿಕ ಜೀವನಶೈಲಿಯಿಂದಾಗಿ ಇಂದಿನ ಜೆನ್‌ಝಿ ಯುವ ಪೀಳಿಗೆಯಲ್ಲಿ ಮಾನವೀಯ ಮೌಲ್ಯಗಳು ಹಾಗೂ ಬಾಂಧವ್ಯಗಳು ಕಡಿಮೆಯಾಗುತ್ತಿದ್ದು, ಇತರರ ತಪ್ಪುಗಳನ್ನು ಎತ್ತಿ ತೋರಿಸುವ ಮನೋಭಾವ ಹೆಚ್ಚಾಗಿದೆ. ಕಾನೂನಿನಲ್ಲಿ ಮಹಿಳೆಯರ ಪರವಾಗಿ ಸಾಕಷ್ಟು ಕಾನೂನುಗಳಿದ್ದು, ಅಧಿಕಾರಿಗಳು ಅವುಗಳ ಬಗ್ಗೆ ಸಮರ್ಪಕ ಅರಿವು ಹೊಂದಿರಬೇಕು. ಹಿರಿಯ ನಾಗರಿಕರು ಹಾಗೂ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಬಂದಾಗ ಅಧಿಕಾರಿಗಳು ತಾಳ್ಮೆಯಿಂದ ವರ್ತಿಸಬೇಕು ಎಂದು ಹೇಳಿದರು. ಅಲ್ಲದೆ, ಜಿಲ್ಲೆಯಲ್ಲಿ ವರದಿಯಾದ ಪ್ರಮುಖ ಪ್ರಕರಣಗಳ ಕುರಿತು ವಿಶ್ಲೇಷಣೆ ನಡೆಸಿ, ಚರ್ಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸುಮಂಗಲಾ ಜಿ.ಹಿರೇಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು. ಹಿರಿಯ ನಾಗರಿಕರಾದ ಸುನಂದ ಪ್ರಾರ್ಥಿಸಿದರು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಜಿ.ವಿಮಲ ಸ್ವಾಗತಿಸಿದರು, ಮಾಹಿತಿ ಸಲಹೆಗಾರರಾದ ನವೀನ್ ನಿರೂಪಿಸಿ, ವಂದಿಸಿದರು.