ಮಡಿಕೇರಿ, ಅ.೩೧: ಮಹಾತ್ಮ ಗಾಂಧೀಜಿ ಅವರ ಹತ್ಯೆಗೆ ಸಂಬAಧಿಸಿದ ವಿಷಯವನ್ನಾಧರಿಸಿ ಪ್ರದರ್ಶನಗೊಂಡ ‘ಗಾಂಧಿ ಹತ್ಯೆಯ ಸತ್ಯ’ ನಾಟಕದ ವೇಳೆ ತೀವ್ರ ಗದ್ದಲ ಉಂಟಾಗಿದ್ದು, ನಾಟಕದ ನಿರ್ದೇಶಕ ಹಾಗೂ ರಚನೆಕಾರ ಅಡ್ಡಂಡ ಕಾರ್ಯಪ್ಪ ಅವರಿಗೆ ಕೆಲ ವೀಕ್ಷಕರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಸುಚಿತ್ರ ಅಕಾಡೆಮಿಯಲ್ಲಿ ನಾಟಕ ಪ್ರದರ್ಶನ ನಡೆಯುತ್ತಿದ್ದ ಸಂದರ್ಭ ಗಾಂಧೀಜಿ ಅವರ ಕುರಿತ ಆಕ್ಷೇಪಾರ್ಹ ಪದಗಳನ್ನು ಬಳಸಲಾಗಿದೆ ಎಂದು ಆಕ್ಷೇಪಿಸಿ ಕೆಲ ವೀಕ್ಷಕರು ನಾಟಕದ ಪ್ರದರ್ಶನಕ್ಕೆ ಅಡ್ಡಿಪಡಿಸಿ ಗದ್ದಲ ಸೃಷ್ಟಿಸಿದ್ದಾರೆ. ಈ ಸಂದರ್ಭ ನಾಟಕದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿದಿದ್ದಾರೆ.