ವೀರಾಜಪೇಟೆ, ಅ. ೩೧: ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಪ್ರತಿವರ್ಷ ಬಾಳುಗೋಡುವಿನಲ್ಲಿ ಕೊಡವ ಸಮಾಜಗಳ ನಡುವೆ ನಡೆಯುವ ಕೊಡವ ನಮ್ಮೆ ಕ್ರೀಡೆ ಸಾಂಸ್ಕೃತಿಕ ಪೈಪೋಟಿ ಕಾರ್ಯಕ್ರಮಗಳು ನವೆಂಬರ್ ೧೯ ರಿಂದ ೨೨ ರವರೆಗೆ ನಡೆಯಲಿದೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾಹಿತಿಯಿತ್ತರು.
ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮುಚ್ಚಯದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನವೆಂಬರ್ ೧೯ ರಂದು ಬೆಳಿಗ್ಗೆ ೯ ಗಂಟೆಗೆ ಸ್ಥಳೀಯ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು. ೧೦ ಗಂಟೆಗೆ ಕೊಡವ ಸಮಾಜಗಳ ನಡುವೆ ಹಾಕಿ ಪಂದ್ಯಾಟದ ಉದ್ಘಾಟನೆ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ನವೆಂಬರ್ ೨೦ ರಂದು ಬೆಳಿಗ್ಗೆ ೧೦ ಗಂಟೆಗೆ ಪೊಮ್ಮಕ್ಕಡ ಹಾಕಿ ಪಂದ್ಯಾಟ (೫ ಎ ಸೈಡರ್ಸ್) ನಡೆಯಲಿದೆ. ನವೆಂಬರ್ ೨೧ ರಂದು ಬೆಳಿಗ್ಗೆ ೯ ಗಂಟೆಗೆ ಪುರುಷರು ಮತ್ತು ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಗೆ ಚಾಲನೆ ನೀಡಲಾಗುವುದು. ೧೦ ಗಂಟೆಗೆ ಹಾಕಿ ಸೆಮಿಫೈನಲ್ ೧೧ ಗಂಟೆಗೆ ಯುದ್ದಸ್ಮಾರಕದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ೨ ಗಂಟೆಗೆ ಪುರುಷರಿಗೆ ಮತ್ತು ಮಹಿಳೆಯರಿಗೆ ಭಾರದ ಗುಂಡು ಎಸೆಯುವ ಸ್ಪರ್ಧೆ ನಡೆಯಲಿದೆ. ನವೆಂಬರ್ ೨೨ ರಂದು ಬೆಳಿಗ್ಗೆ ೯ ಗಂಟೆಗೆ ಮಂದ್ ಮರಿಯುವೊ, ೯.೩೦ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪೈಪೋಟಿ ನಡೆಯಲಿದೆ. ಅಪರಾಹ್ನ ೨ ಗಂಟೆಗೆ ಪುರುಷರ ಮತ್ತು ಮಹಿಳೆಯರ ಹಾಕಿ ಪಂದ್ಯಾಟದ ಫೈನಲ್ ಪಂದ್ಯ ನಡೆಯಲಿದೆ. ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಪೈಪೋಟಿ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ೩೪ ಕೊಡವ ಸಮಾಜಗಳು ಕೊಡವ ನಮ್ಮೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಮಾಹಿತಿ ನೀಡಿದರಲ್ಲದೇ, ಪೈಪೋಟಿಯಲ್ಲಿ ಪಾಲ್ಗೊಳ್ಳುವ ತಂಡಗಳು ನವೆಂಬರ್ ೧೦ ರೊಳಗೆ ಹೆಸರು ನೋಂದಾಯಿಸಿಕೊಳ್ಳುವAತೆ ತಿಳಿಸಿದ ಅವರು, ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ ಎಂದರು ನಾಲ್ಕು ದಿನ ಮಧ್ಯಾಹ್ನ ಊಟೋಪಚಾರ ಇದ್ದು ಕೊಡವ ಸಮಾಜಗಳ ಪ್ರತಿನಿಧಿಗಳು ಹಾಗೂ ಸದಸ್ಯರು ಮತ್ತು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಹಕರಿಸುವಂತೆ ಹೇಳಿದರು.
ಈ ಸಂದರ್ಭ ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ, ಕ್ರೀಡಾ ಸಮಿತಿ ಸಂಚಾಲಕ ಕಂಬೀರAಡ ಕಿಟ್ಟು ಕಾಳಪ್ಪ, ಸಂಚಾಲಕ ಬೊಳಿಯಂಗಡ ದಾದುಪೂವಯ್ಯ, ಕಾರ್ಯದರ್ಶಿ ಕೋಟೆರ ರಘು ಕಾರ್ಯಪ್ಪ, ಬಾಳೆಲೆ ಕೊಡವ ಸಮಾಜದ ಅಧ್ಯಕ್ಷ ಮಲಚೀರ ಬೋಸ್ ದೇವಯ್ಯ, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್, ಮಾದಾಪುರ ಕೊಡವ ಸಮಾಜದ ಅಧ್ಯಕ್ಷ ಮಂಡೇಪAಡ ಮನು ಮೇದಪ್ಪ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ, ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುAಡ ಉಪಸ್ಥಿತರಿದ್ದು ಮಾತನಾಡಿದರು.
ಈ ಸಂದರ್ಭ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.