ಸೋಮವಾರಪೇಟೆ, ಅ. ೩೧: ಪಟ್ಟಣದಿಂದ ತಾಕೇರಿ ಮುಖ್ಯರಸ್ತೆಯ ಪ್ರವಾಸಿ ಮಂದಿರ ಬಳಿಯಲ್ಲಿರುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಂಡಿಗೆ ಬಿದ್ದು, ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಪ್ರವಾಸಿ ಮಂದಿರದ ತಿರುವಿನಲ್ಲಿ ಆಗಾಗ್ಗೆ ಇಂತಹ ಅವಘಡಗಳು ನಡೆಯುತ್ತಿದ್ದು, ಸಂಬAಧಿಸಿದ ಲೋಕೋಪಯೋಗಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ರಸ್ತೆಗೆ ಅಡ್ಡಲಾಗಿ ಹಾಕಲೆಂದು ತಂದಿರುವ ಮೋರಿಗಳನ್ನು ರಸ್ತೆಯ ಪಕ್ಕದಲ್ಲಿಯೇ ಇಡಲಾಗಿದ್ದು, ಈವರೆಗೆ ಕಾಮಗಾರಿ ಕೈಗೊಂಡಿಲ್ಲ.

ರಸ್ತೆ ಪಕ್ಕದಲ್ಲಿರುವ ಗುಂಡಿಯ ಮೇಲೆ ಗಿಡಗಂಟಿಗಳು ಬೆಳೆದಿದ್ದು, ಎದುರು ಭಾಗದಿಂದ ಆಗಮಿಸುವ ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುವ ಸಂದರ್ಭ ಅವಘಡಗಳು ಸಂಭವಿಸುತ್ತಿದೆ.

ಆದರೂ ಇಲಾಖೆ ಸುಧಾರಿತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.