ಸುಂಟಿಕೊಪ್ಪ, ನ. ೧: ಇಂದಿನ ಕಾಲಘಟ್ಟದಲ್ಲಿ ಕುಟುಂಬಗಳಲ್ಲಿ ಯಾವುದೇ ರೀತಿಯ ಕಷ್ಟ ಸಮಸ್ಯೆಗಳು ಎದುರುಗೊಂಡಾಗ ಎದೆಗುಂದದೆ ಮಹಿಳೆಯರು ಪ್ರಮುಖ ಪಾತ್ರವಹಿಸುವ ಮೂಲಕ ಕುಟುಂಬ ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಮಂಜಿಕೆರೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮೂರ್ತಿ ಹೇಳಿದರು.
ಮಂಜಿಕೆರೆ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಕಾರ್ಯಕ್ಷೇತ್ರದ ಕಾನ್ಬೈಲ್ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ೩ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲಘಟ್ಟದಲ್ಲಿ ಮಹಿಳೆಯರನ್ನು ಗೃಹ ಬಂಧನದಲ್ಲಿ ಇರಿಸಲಾಗಿರುತ್ತಿತ್ತು. ಅಂತಹ ಕಾಲಘಟ್ಟದಲ್ಲೂ ಮಹಿಳೆಯರು ಕುಟುಂಬ ನಿರ್ವಹಣೆಗೆ ಮಾತ್ರ ಸಿಮೀತವಾಗಿದ್ದ ಮಹಿಳೆಯರು ಬದಲಾದ ಕಾಲಘಟದಲ್ಲಿ ಶಿಕ್ಷಣದೊಂದಿಗೆ ಸ್ವಸಹಾಯ ಸಂಘ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿAದ ವ್ಯವಹಾರಿಕ ಜ್ಞಾನವನ್ನು ವೃದ್ಧಿಸಿಕೊಂಡಿದ್ದಾರೆ. ಮುಂದುವರಿದು ಮಾತನಾಡಿದ ಅವರು, ಮಕ್ಕಳ ಪಾಲನೆ ಪೋಷಣೆಯಲ್ಲಿ ಪೋಷಕರ ಜವಬ್ಧಾರಿ ಮಹತ್ತರದಾಗಿದೆ.ಅವರಿಗೆ ಉತ್ತಮ ಶಿಕ್ಷಣದೊಂದಿಗೆ, ಸಂಸ್ಕಾರವನ್ನು ನೀಡಿದಾಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಮೂಡಿ ಬರಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕ ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಸಹಾಯ ಸಂಘದಿAದ ಸಾಲ ಪಡೆದುಕೊಂಡು ಅದನ್ನು ಯಾವ ರೀತಿಯಲ್ಲಿ ವಿನಿಯೋಗಿಸಬೇಕು ಮತ್ತು ಸದೃಢವಾಗಿ ಬೆಳೆಯಬೇಕೆಂಬ ಸಂಕಲ್ಪದೊAದಿಗೆ ಪ್ರತಿ ಕಾರ್ಯಕ್ಷೇತ್ರದಲ್ಲೂ ಜ್ಞಾನ ವಿಕಾಸ ಕೇಂದ್ರವನ್ನು ತೆರೆಯಲಾಗಿದ್ದು ಸದಸ್ಯರಿಗೆ ಮಾಹಿತಿಗಳನ್ನು ನೀಡುವ ಮೂಲಕ ಸಂಘದ ಸದಸ್ಯರನ್ನು ವೈಯಕ್ತಿಕ ಬೆಳವಣಿಗೆ ಕಂಡುಕೊಳ್ಳುತ್ತಿರುವುದು ಆಶಾದಾಯಕ ವಿಚಾರವಾಗಿದೆ ಎಂದರು.
ಗೀತಾ ಪ್ರಾರ್ಥಿಸಿ, ಸೇವಾ ಪ್ರತಿನಿಧಿ ಯಶೋಧ ಸ್ವಾಗತಿಸಿ, ಗೀತಾ ಕೇಂದ್ರದ ವರದಿ ವಾಚಿಸಿ, ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ ನಿರೂಪಿಸಿದರು.
ಈ ಸಂದರ್ಭ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.