ಮಡಿಕೇರಿ, ನ. ೧: ಕನ್ನಡ ಕೇವಲ ನಮ್ಮ ಭಾಷೆಯಲ್ಲ ಅದು ನಮ್ಮ ಉಸಿರು ಎಂದು ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವ ಪಿ. ನರೇಂದ್ರ ಸ್ವಾಮಿ ಹೇಳಿದರು.
ಕೊಡಗು ಜಿಲ್ಲಾಡಳಿತ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ೭೧ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾಷಾವಾರು ಪ್ರಾಂತ್ಯಗಳ ಪುನರ್ ವಿಂಗಡಣೆ ಬಳಿಕ ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ೧೯೫೬ ನವೆಂಬರ್ ೧ ರಂದು ಒಟ್ಟುಗೂಡಿಸಿ ಅಖಂಡ ಮೈಸೂರು ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಯಿತು. ಅಂದು ಕನ್ನಡನಾಡು ಏಕೀಕರಣಗೊಂಡ ದಿನವನ್ನೇ ನಾವೀಗ ಕನ್ನಡ ನಾಡಹಬ್ಬವಾಗಿ ವಿಜೃಂಭಣೆಯಿAದ ಆಚರಿಸುತ್ತಿದ್ದೇವೆ. ಕನ್ನಡ ಸಾರಸ್ವತ ಲೋಕಕ್ಕೆ ೮ ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ಕನ್ನಡ ಭಾಷೆಯ ಉತ್ಕೃಷ್ಟತೆ ಹಾಗೂ ಗರಿಮೆಗೆ ಸಾಕ್ಷಿಯಾಗಿದೆ.
ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕನ್ನಡ ಸಾಹಿತ್ಯದ ಕಂಪು ಪಸರಿಸಿದ ಆದಿಕವಿ ಪಂಪರಿAದ ಹಿಡಿದು, ರಾಷ್ಟçಕವಿ ಕುವೆಂಪು, ದ.ರಾ ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ. ಗೋಕಾಕ್, ಬಿ.ಎಂ. ಶ್ರೀಕಂಠಯ್ಯ ಅವರಂತಹ ಅನೇಕ ಪ್ರಸಿದ್ದ ಸಾಹಿತಿಗಳು ಕನ್ನಡ ಸಾಹಿತ್ಯವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಎರಡೂವರೆ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡಕ್ಕೆ ಶಾಸ್ತಿçÃಯ ಭಾಷೆಯ ಸ್ಥಾನಮಾನ ಸಿಕ್ಕಿದೆ. ಕನ್ನಡದ ಮೇರು ಕೃತಿ ಕವಿರಾಜ ಮಾರ್ಗದಿಂದ ಹಿಡಿದು ಇಂದಿನ ಆಧುನಿಕ ಸಾಹಿತ್ಯವರೆಗೆ ಶ್ರೇಷ್ಠಕವಿಗಳು ಮತ್ತು ಸಾಹಿತಿಗಳು, ಸಂತರು ಕನ್ನಡ ನುಡಿಯನ್ನು ಶ್ರೀಮಂತಗೊಳಿಸಿದ್ದಾರೆ ಎಂದು ನರೇಂದ್ರ ಸ್ವಾಮಿ ಹೇಳಿದರು. ೭೧ನೇ ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ನಮ್ಮ ಸರ್ಕಾರ ಕೊಡಗಿನ ಇಬ್ಬರು ಸಾಧಕರ ಸೇವೆಯನ್ನು ಗುರುತಿಸಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಭಾರತ ಹಾಕಿ ತಂಡದ ಗೋಲ್ಕೀಪರ್ ಆಗಿದ್ದ ಕೊಡಗಿನ ಡಾ.ಎ.ಬಿ. ಸುಬ್ಬಯ್ಯ ಹಾಗೂ ಪ್ರಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಸೇವೆ ಗುರುತಿಸಿ ೨೦೨೬ ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದೆ. ಇನ್ನು ಭಾರತದ ರಕ್ಷಣಾ ಕ್ಷೇತ್ರಕ್ಕೆ ಕೊಡಗು ಜಿಲ್ಲೆಯ ಸೇವೆ ಅಪಾರ.
ಸ್ವತಂತ್ರ ಭಾರತದ ಮೊದಲ ಮಹಾದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರಂತಹ ಮಹನೀಯರ ಸೇವೆ ಸ್ಮರಣೀಯ. ಕನ್ನಡ ಏಕೀಕರಣದಲ್ಲೂ ಕೊಡಗಿನವರ ಪಾತ್ರ ಹಾಗೂ ಕೊಡುಗೆ ಅತ್ಯಂತ ಪ್ರಮುಖವಾದದ್ದು. ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲೂ ಕೊಡಗಿನ ಕೊಡುಗೆ ಅಪಾರ. ಕನ್ನಡದ ಪ್ರಸಿದ್ಧ ಲೇಖಕಿಯಾಗಿದ್ದ ಕೊಡಗಿನ ಗೌರಮ್ಮನವರು ತಮ್ಮ ಕಥೆಗಳು ಮತ್ತು ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಲೋಕಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದರು.
ಅದೇ ರೀತಿ ಬಿ.ಡಿ. ಗಣಪತಿ ಸೇರಿದಂತೆ ಹಲವು ಸಾಹಿತಿಗಳು ಕೊಡವ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡೇ ಕನ್ನಡ ಸಾಹಿತ್ಯಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಸಚಿವರು ನುಡಿದರು. ಇತ್ತೀಚೆಗೆ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಮಾಚೆಟ್ಟಿರ ಪೂವಮ್ಮ ಅವರು ಕೊಡಗಿನವರೇ ಎಂಬುದು ಹೆಮ್ಮೆಪಡುವ ಸಂಗತಿಯಾಗಿದೆ ಎಂದರು.
ನೆಮ್ಮದಿ - ಭದ್ರತೆಗೆ ಶ್ರಮ
ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಚೈತನ್ಯ, ಬದುಕಿಗೆ ನೆಮ್ಮದಿ ಹಾಗೂ ಭದ್ರತೆ ನೀಡಲು ಶ್ರಮಿಸಿದೆ. ವಿಶ್ವದಲ್ಲೇ ಹೆಚ್ಚು ಯುವಜನರನ್ನು ಹೊಂದಿರುವ ದೇಶ ನಮ್ಮ ಭಾರತ. ಶೇ ೬೫ ರಷ್ಟು ಜನರು ೩೫ ವರ್ಷದೊಳಗಿನವರು. ಇಂತಹ ಯುವಪೀಳಿಗೆಯನ್ನು ಗಮನದಲ್ಲಿ ಇಟ್ಟುಕೊಂಡೇ ವೃತ್ತಿಪರ ಕೋರ್ಸ್ಗಳ ಪ್ರವೇಶದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.೭.೫ ರಷ್ಟು ಮೀಸಲಾತಿ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಲು ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ, ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾನಿಲಯ, ೬ನೇ ತರಗತಿಯಿಂದಲೇ ಎಐ ಶಿಕ್ಷಣ, ಹೀಗೆ ಹಲವು ಮಹತ್ವ ಕಾರ್ಯಕ್ರಮಗಳನ್ನು ಪ್ರಕಟಿಸಿ ಕಾರ್ಯರೂಪಕ್ಕೆ ತರಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸಲಾಗಿದೆ.
೨೦೨೩ ರಲ್ಲಿ ಆರಂಭಿಸಿದ ಶಕ್ತಿ ಯೋಜನೆಯಡಿ ಇದುವರೆಗೆ ಕೊಡಗು ಜಿಲ್ಲೆಯಲ್ಲಿ ೧.೯೯ ಕೋಟಿ ಮಹಿಳಾ ಪ್ರಯಾಣಿಕರು ಮತ್ತು ೪.೯೨ ಲಕ್ಷ ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಗೃಹಲಕ್ಷಿö್ಮ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಮಾಸಿಕ ೨೦೦೦ ರೂಪಾಯಿ ಜಮೆ ಮಾಡಲಾಗುತ್ತಿದೆ.
ಆಗಸ್ಟ್-೨೦೨೩ ರಿಂದ ಜೂನ್-೨೦೨೬ರವರೆಗೆ ಒಟ್ಟು ೭೧೫.೪೧ ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ೨೦೨೬ರ ಸೆಪ್ಟೆಂಬರ್ ಅಂತ್ಯದವರೆಗೆ ಕೊಡಗು ಜಿಲ್ಲೆಯಾದ್ಯಂತ ಒಟ್ಟು ೨.೦೩ ಲಕ್ಷ ವಿದ್ಯುತ್ ಸಂಪರ್ಕಗಳಿದ್ದು, ಒಟ್ಟು ೨.೦೧ ಲಕ್ಷ ಗ್ರಾಹಕರು ಹೆಸರು ನೋಂದಾಯಿಸಿಕೊAಡಿದ್ದು, ಶೇ.೯೮.೯೧ ರಷ್ಟು ಪ್ರಗತಿ ಸಾಧಿಸಲಾಗಿದೆ. ಯೋಜನೆಯಡಿ ೮.೧೨ ಕೋಟಿ ರೂಪಾಯಿ ಸಹಾಯಧನ ಒದಗಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಬಿಪಿಎಲ್ ಫಲಾನುಭವಿಗಳಿಗೆ ೧೦ಕೆ.ಜಿ ಅಕ್ಕಿಯನ್ನು ಪ್ರತಿ ತಿಂಗಳು ವಿತರಣೆ ಮಾಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು ೧,೦೪,೯೪೫ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಪಡಿತರ ಚೀಟಿದಾರರು ಯೋಜನೆ ಲಾಭ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ೨೦೨೬ ಸೆಪ್ಟೆಂಬರ್ ಅಂತ್ಯದವರೆಗೆ ಒಟ್ಟು ೨,೫೧೧ ನಿರುದ್ಯೋಗಿ ಯುವಕ-ಯುವತಿಯರು ನೋಂದಾಯಿಸಿಕೊAಡಿದ್ದು, ಈ ಪೈಕಿ ಒಟ್ಟು ೨,೨೪೨ ಅಭ್ಯರ್ಥಿಗಳಿಗೆ ಡಿ.ಬಿ.ಟಿ ಮೂಲಕ ಆರ್ಥಿಕ ನೆರವು ತಲುಪಿಸಲಾಗಿದೆ ಎಂದು ನರೇಂದ್ರ ಸ್ವಾಮಿ ಹೇಳಿದರು.
ನೇಗಿಲಯೋಗಿ ಯೋಜನೆ
ಇಂದು ಭೀಕರ ಬರ ಎದುರಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ರೈತರಿಗೆ ಕೃಷಿ ಯಂತ್ರೋಪಕರಣಗಳ ಸೌಲಭ್ಯ ಒದಗಿಸಲು ನೇಗಿಲಯೋಗಿ ಯೋಜನೆ ಜಾರಿಗೆ ತರಲು ಸಿದ್ಧವಾಗಿದೆ. ೩ ಎಕರೆ ಒಳಗೆ ಭೂಮಿ ಹೊಂದಿರುವ ರೈತರಿಗೆ ಜಮೀನು ಉಳುಮೆ ಸೇರಿ ಇತರೆ ಚಟುವಟಿಕೆಗಳಿಗೆ ಪ್ರೋತ್ಸಾಹಧನ ನೀಡಲಿದೆ. ರೈತರಿಗೆ ಗುಣಮಟ್ಟದ ಬೀಜ ಹಾಗೂ ಕೀಟನಾಶಕ ವಿತರಣೆ ಆಗಬೇಕು. ನಕಲಿ ಬೀಜ ಹಾಗೂ ಕೀಟನಾಶಕ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಕೊಡಗು ಜಿಲ್ಲೆಯಲ್ಲಿ ಭತ್ತ ಮತ್ತು ಮುಸುಕಿನ ಜೋಳವನ್ನು ಪ್ರಮುಖ ಆಹಾರದ ಬೆಳೆಯನ್ನಾಗಿ ಬೆಳೆಯಲಾಗುತ್ತಿದೆ. ೨೦೨೬-೨೭ನೇ ಸಾಲಿನಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆಬೀಜ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆಯಡಿ ೪೦ ಫಲಾನುಭವಿಗಳಿಗೆ ಕೃಷಿ ಹೊಂಡ ನಿರ್ಮಿಸಿ ೨೫.೨೯ ಲಕ್ಷ ರೂಪಾಯಿ ವೆಚ್ಚ ಭರಿಸಲಾಗಿದೆ.
ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಸೋಲಿಗ, ಹಸಲರು, ಗೌಡಲು, ಸಿದ್ಧಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಬೆಟ್ಟಕುರುಬ, ಯರವ, ಪಣಿಯ ಬುಡಕಟ್ಟು ಜನಾಂಗದವರಿಗೆ ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ೧೭೫ ಮನೆಗಳನ್ನು ಮಂಜೂರು ಮಾಡಲಾಗಿದೆ. ೪.೫೬ ಕೋಟಿ ರೂ. ಮೊತ್ತದಲ್ಲಿ ಕುಶಾಲನಗರ ತಾಲೂಕು ನಂಜರಾಯಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನಿರ್ಮಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು, ೫೦ ನರ್ಸಿಂಗ್ ಅಧಿಕಾರಿಗಳ ನೇಮಕಾತಿಗೆ ಅನುಮೋದನೆ ದೊರೆತಿದೆ. ಇದಲ್ಲದೆ, ೩೦೦ ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯ ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದರು.
ಕಾಮಗಾರಿಗೆ ಅನುದಾನ
ಲೋಕೋಪಯೋಗಿ ಇಲಾಖೆಯಡಿ ೨೦೨೫-೨೬ನೇ ಸಾಲಿಗೆ ಅಪೆಂಡಿಕ್ಸ್-ಇ ಯೋಜನೆಯಡಿ ವೀರಾಜಪೇಟೆ ವಿಧಾನಸಬಾ ಕ್ಷೇತ್ರಕ್ಕೆ ೨೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ಒಟ್ಟು ೧೮ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ ೫ ಕಾಮಗಾರಿಗಳು ಪೂರ್ಣಗೊಂಡಿದ್ದು, ೧೨ ಕಾಮಗಾರಿಗಳು ಪ್ರಗತಿಯಲ್ಲಿವೆ.
ಹಾಗೆಯೇ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ೮ ಕಾಮಗಾರಿಗಳಿಗೆ ೧೫ ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ೭ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿವೆ. ಬರದಲ್ಲಿ ಪಶುಗಳ ಕ್ಷೇಮಕ್ಕೂ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದAತೆ ಮೇವು ಉತ್ಪಾದನೆ ಹೆಚ್ಚಿಸಲು ಮೇವಿನ ಬೀಜದ ಕಿರುಪೊಟ್ಟಣಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತದೆ.
ರೈತರಿಗೆ ಮೀನು ಕೃಷಿ ಕೈಗೊಳ್ಳಲು ಉತ್ತೇಜನ ನೀಡುವ ಸಲುವಾಗಿ ಇಲಾಖೆಯು ೨೦೨೬-೨೭ ನೇ ಸಾಲಿನಲ್ಲಿ ಜಿಲ್ಲಾವಲಯ ಯೋಜನೆಯಡಿ ಸೆಪ್ಟೆಂಬರ್ ಮಾಹೆವರೆಗೆ ಒಟ್ಟು ೧೮.೩೮ ಲಕ್ಷ ರೂಪಾಯಿ ಮೀನುಮರಿಗಳನ್ನು ವಿತರಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಪ್ರಜಾಸೇವಾ ಅಭಿಯಾನ
ನಮ್ಮ ಸರ್ಕಾರ ಆಡಳಿತವನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರತೀ ತಿಂಗಳ ೧ನೇ ಮತ್ತು ೩ನೇ ಶನಿವಾರ ನನ್ನ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಅಭಿಯಾನ ಜನಸಂಪರ್ಕ ಏರ್ಪಡಿಸಲಾಗುತ್ತಿದೆ ಎಂದು ಸಚಿವ ನರೇಂದ್ರ ಸ್ವಾಮಿ ಹೇಳಿದರು.
ಸಮಾರಂಭದಲ್ಲಿ ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷಿö್ಮ, ನಗರಸಭಾ ಮಾಜಿ ಅಧ್ಯಕ್ಷೆ ಕಲಾವತಿ, ತಹಶೀಲ್ದಾರರು, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪಥ ಸಂಚಲನ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಸಶಸ್ತç ಮೀಸಲು ಆರಕ್ಷಕ ತಂಡ, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಎನ್ಸಿಸಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಎನ್ಸಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಎನ್ಸಿಸಿ, ಸಂತ ಜೋಸೇಫರ ಪ್ರೌಢಶಾಲೆ ಎನ್ಸಿಸಿ, ಸಂತ ಮೈಕಲರ ಪ್ರೌಢ ಶಾಲೆ, ಎನ್ಸಿಸಿ, ಕೊಡಗು ವಿದ್ಯಾಲಯ ಎನ್ಸಿಸಿ, ಸಂತ ಜೋಸೇಫರ ಪ್ರೌಢ ಶಾಲೆ ಗೈಡ್ಸ್, ಸಂತ ಮೈಕಲರ ಪ್ರೌಢಶಾಲೆ ಗೈಡ್ಸ್, ಸಂತ ಜೋಸೇಫರ ಪ್ರಾಥಮಿಕ ಶಾಲೆ ಗೈಡ್ಸ್, ಶ್ರೀ ರಾಜೇಶ್ವರಿ ಶಾಲೆ ಸ್ಕೌಟ್ಸ್, ಸಂತ ಜೋಸೇಫರ ಪ್ರಾಥಮಿಕ ಶಾಲೆ ಸ್ಕೌಟ್ಸ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸೇವಾದಳ, ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸೇವಾದಳ, ಸಂತ ಮೈಕಲರ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆ ಸೇವಾದಳ, ಬ್ಲಾಸಂ ಶಾಲೆ ಸ್ಕೌಟ್ಸ್ ತಂಡಗಳಿAದ ಪೊಲೀಸ್ ವಾದ್ಯಗೋಷ್ಠಿ ತಂಡವನ್ನೊಳಗೊAಡು ಆಕರ್ಷಕ ಪಥ ಸಂಚಲನ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮ
ಮಡಿಕೇರಿಯ ಸಂತ ಜೋಸೇಫರ ಸಂಯುಕ್ತ ಪ್ರೌಢಶಾಲೆ, ಸಂತ ಮೈಕಲರ ಪ್ರೌಢ ಶಾಲೆ, ಕೊಡಗು ವಿದ್ಯಾಲಯ, ಕ್ರೆಸೆಂಟ್ ಶಾಲೆ, ಬ್ಲಾಸಂ ಶಾಲೆ ತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಜನರಲ್ ತಿಮ್ಮಯ್ಯ ಶಾಲೆ ಮಕ್ಕಳು ವಂದೇ ಮಾತರಂ, ಪಿಎಂಶ್ರೀ ಹಿರಿಯ ಪ್ರಾಥಮಿಕ ಶಾಳೆ ಮಕ್ಕಳು ನಾಡಗೀತೆ, ಕೊಡಗು ವಿದ್ಯಾಲಯ ಮಕ್ಕಳು ರೈತಗೀತೆ ಹಾಡಿದರು.
ಸ್ತಬ್ಧಚಿತ್ರ ಮೆರವಣಿಗೆ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಗರದಲ್ಲಿ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಕೃಷಿ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಪಾಲನಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆಗಳ ಸ್ತಬ್ಧ ಚಿತ್ರಗಳು ಪಾಲ್ಗೊಂಡಿದ್ದವು.