ಮಡಿಕೇರಿ, ನ. ೨: ತಾ. ೨ ರಿಂದ ಆರಂಭಗೊAಡು ೨೦ ರವರೆಗೆ ಮೈಸೂರು, ಕೊಡಗು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಸರ್ಕಾರ ಖನಿಜ ಸಂಪನ್ಮೂಲಗಳ ಪತ್ತೆಗಾಗಿ ಮಲ್ಟಿ ಸೆನ್ಸರ್ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದೆ.

ಈ ಸಂದರ್ಭ ವಿಮಾನವು ಕಡಿಮೆ ಎತ್ತರದಲ್ಲಿ ಹಾರಾಟ ನಡೆಸುತ್ತವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಆತಂಕ ಹಾಗೂ ಗೊಂದಲಕ್ಕೆ ಒಳಗಾಗದಂತೆ ಮಂಡ್ಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.