ಮಡಿಕೇರಿ, ನ. ೨: ಕ್ರೀಡಾ ತವರು ಕೊಡಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾ ಸಂಭ್ರಮ ಮೇಳೈಸಿದೆ. ರಾಜ್ಯದ ೨೩ ಜಿಲ್ಲೆಗಳಿಂದ ಆಗಮಿಸಿರುವ ಪತ್ರಕರ್ತರು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕ್ರೀಡಾ ಹಬ್ಬಕ್ಕೆ ಮೆರುಗು ತಂದಿದ್ದಾರೆ. ಪ್ರತಿಕೂಲ ಹವಾಮಾನದ ಸವಾಲಿನ ನಡುವೆಯೂ ಪತ್ರಕರ್ತರ ಕ್ರೀಡಾ ಉತ್ಸಾಹಕ್ಕೆ ಯಾವುದೇ ಕುಂದುAಟಾಗಲಿಲ್ಲ. ಮಳೆಯ ಆತಂಕದ ನಡುವೆಯೇ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಸಂಭ್ರಮ ಹಾಗೂ ಸಡಗರದಿಂದ ಆರಂಭಗೊAಡಿದ್ದು, ಮೈದಾನಗಳಲ್ಲಿ ಕ್ರೀಡಾ ಸ್ಪರ್ಧೆಗಳ ರಂಗು ಕಳೆಗಟ್ಟಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರು ಪರಸ್ಪರ ಸ್ನೇಹ, ಸೌಹಾರ್ದತೆ ಹಾಗೂ ಕ್ರೀಡಾ ಮನೋಭಾವದೊಂದಿಗೆ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಹಾಗೂ ಪೊಲೀಸ್ ಕವಾಯತು ಮೈದಾನಗಳಲ್ಲಿ ಸಿದ್ಧಪಡಿಸಲಾಗಿದ್ದ ಐದು ಪಿಚ್‌ಗಳಲ್ಲಿ ಏಕಕಾಲದಲ್ಲಿ ಕ್ರಿಕೆಟ್ ಪಂದ್ಯಗಳು ನಡೆದವು. ಆತಿಥೇಯ ಕೊಡಗಿನ ಕೊಡಗು ಅರೇಬಿಕಾ ಹಾಗೂ ಕೊಡಗು ರೋಬಸ್ಟಾ ತಂಡಗಳು ಸೇರಿದಂತೆ ಒಟ್ಟು ೨೪ ತಂಡಗಳು ಕಣಕ್ಕಿಳಿದು ತಮ್ಮ ಪ್ರತಿಭೆ ಪ್ರದರ್ಶಿಸಿದವು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇAದ್ರ ಸ್ವಾಮಿ ಅವರು ಪಂದ್ಯಾಟಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಸಮಾಜ ಸರಿ ದಾರಿಯಲ್ಲಿ ಸಾಗಬೇಕಾದರೆ ಪತ್ರಕರ್ತರ ಪಾತ್ರವೂ ಮುಖ್ಯವಾಗಿರುತ್ತದೆ. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ರಾಜಕಾರಣಿಗಳಿಗೆ ಅಗತ್ಯ ಸಲಹೆ, ಮಾರ್ಗದರ್ಶನವನ್ನೂ ತಮ್ಮ ವರದಿಗಾರಿಕೆ ಮೂಲಕ ನೀಡುತ್ತಾರೆ. ಅದನ್ನು ನಾವುಗಳು ಸಕಾರಾತ್ಮಕವಾಗಿ ತೆಗೆದುಕೊಂಡಲ್ಲಿ ಸಮಾಜಕ್ಕೂ ಪ್ರಯೋಜನವಾಗುತ್ತದೆ ಎಂದರು. ಕ್ರೀಡಾಕೂಟದಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವಂತಾಗಬೇಕು. ರಾಜ್ಯದ ೨೩ ಜಿಲ್ಲೆಗಳಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಒಂದು ರೀತಿಯ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ಕ್ರೀಡಾಕೂಟ ಏರ್ಪಡಿಸುವಲ್ಲಿ ಹಲವರ ಪರಿಶ್ರಮವಿದ್ದು, ಕ್ರೀಡಾ ಉತ್ಸವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಕ್ರೀಡಾಕೂಟಕ್ಕೆ ಪ್ರಾಯೋಜಕತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ ಹಲವರು ಸಹಕಾರ ನೀಡಿದ್ದಾರೆ. ಮುಂದಿನ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಆತಿಥ್ಯ ವಹಿಸಲಿದೆ ಎಂದು ಘೋಷಿಸಿದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಕ್ಷೇತ್ರವು ನಾಲ್ಕನೇ ಅಂಗವಾಗಿದೆ. ಕ್ರಿಕೆಟ್ ಜೊತೆಗೆ ಇತರೆ ಕ್ರೀಡೆಗಳಲ್ಲೂ ಸಹ ತೊಡಗಿಸಿಕೊಳ್ಳುವಂತಾಗಬೇಕು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಪತ್ರಕರ್ತರು ಇಲ್ಲಿನ ಧಾರ್ಮಿಕ ಹಾಗೂ ಪ್ರವಾಸಿ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಲೇಖನಗಳನ್ನು ಬರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಹೈಕೋರ್ಟ್ ಹಿರಿಯ ವಕೀಲ ಚಂದ್ರಮೌಳಿ ಮಾತನಾಡಿ, ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿರುವ ಪತ್ರಕರ್ತರು ಇಲ್ಲಿನ ನೆನಪನ್ನು ತೆಗೆದುಕೊಂಡು ಹೋಗಬೇಕು ಎಂದರು. ಹಿರಿಯ ಪತ್ರಕರ್ತ ಎನ್.ರವಿಕುಮಾರ್ ಟೆಲಕ್ಸ್ ಮಾತನಾಡಿ, ರಾಜ್ಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ೧೨ ಸಾವಿರಕ್ಕೂ ಹೆಚ್ಚು ಪತ್ರಕರ್ತರು ಸದಸ್ಯತ್ವ ಹೊಂದಿದ್ದು, ಕ್ರೀಡೆ, ಸಾಂಸ್ಕೃತಿಕ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಮಾತನಾಡಿ ರಾಜ್ಯದ ೨೩ ಜಿಲ್ಲೆಗಳಿಂದ ೨೪ ತಂಡಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದಿAದ ಸಭೆ ಸಮಾರಂಭ, ಸಮಾವೇಶಗಳನ್ನು ನಡೆಸಲಾಗುತ್ತಿದೆ. ಆದರೆ ಕ್ರೀಡಾಕೂಟ ಏರ್ಪಡಿಸುವುದು ವಿಭಿನ್ನವಾಗಿದೆ. ಪತ್ರಕರ್ತರು ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಆಗಮಿಸುವಂತಾಗಲು, ಜೊತೆಗೆ ಕ್ರೀಡಾಕೂಟದಿಂದ ಬಾಂಧವ್ಯ ಏರ್ಪಡಲು ಇದೊಂದು ಅವಕಾಶ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭ ಕ್ರೀಡಾಕೂಟಕ್ಕೆ ಸಹಕರಿಸಿದ ಸಚಿವ ನರೇಂದ್ರ ಸ್ವಾಮಿ, ಬಹುಮಾನ ಪ್ರಾಯೋಜಕರಾದ ರಿಪಬ್ಲಿಕ್ ನೆಟ್‌ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಜಿ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕಿ ಬಿ.ಆರ್.ಸವಿತಾ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೋಕೇಶ್, ಉಪಾಧ್ಯಕ್ಷ ಮತ್ತಿಕರೆ ಜಯರಾಮ್, ಕಾರ್ಯದರ್ಶಿ ಸೋಮಶೇಖರ ಕೆರೆಗೋಡು, ಪುಂಡಲೀಕ ಬಿ.ಬಾಳೋಜಿ, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ ಹೊಳ್ಳ, ನಿಕಟ ಪೂರ್ವ ಉಪಾಧ್ಯಕ್ಷ ಭವಾನಿಸಿಂಗ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ, ವಾರ್ತಾಧಿಕಾರಿ, ಕಾರ್ಯನಿರತ ಪತ್ರಕರ್ತರ ಸಂಘದ ವಿವಿಧ ಘಟಕದ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು, ಪದಾಧಿಕಾರಿಗಳು, ಇತರರು ಇದ್ದರು.

ವೀರಾಜಪೇಟೆ ಇಂಟೋಪೀಸ್ ಸಂಸ್ಥೆಯ ವಿದ್ಯಾರ್ಥಿಗಳು ಕೊಡವ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ.ರಾಕೇಶ್ ಸ್ವಾಗತಿಸಿದರು. ವೀರಾಜಪೇಟೆ ತಾಲೂಕು ಅಧ್ಯಕ್ಷ ರಜಿತ್ ಕುಮಾರ್ ಗುಹ್ಯ ನಿರೂಪಿಸಿದರು. ವಿಷ್ಮ ಪೆಮ್ಮಯ್ಯ ವಂದಿಸಿದರು.