ಪೊನ್ನಂಪೇಟೆ, ನ. ೩: ದಕ್ಷಿಣ ಕೊಡಗಿನ ಬೆಳ್ಳೂರು ಗ್ರಾಮದಲ್ಲಿ ನಿರಂತರವಾಗಿ ನಡೆಯುತ್ತಿರುವ ಹುಲಿ ದಾಳಿಗೆ ಇದುವರೆಗೆ ೫೪ ಹಸುಗಳು ಬಲಿಯಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಶಾಂತೆಯAಡ ರವಿ ಕುಶಾಲಪ್ಪ ಅವರು ವೀರಾಜಪೇಟೆ ತಾಲೂಕು ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಹಾಗೂ ಬಿಜೆಪಿ ಮುಖಂಡ ಅಜ್ಜಿಕುಟ್ಟಿರ ಪ್ರವೀಣ್ ಅವರೊಂದಿಗೆ ಬೆಳ್ಳೂರು ಗ್ರಾಮಕ್ಕೆ ತೆರಳಿ, ಹುಲಿ ದಾಳಿಯಿಂದ ನಷ್ಟ ಅನುಭವಿಸಿದ ರೈತರನ್ನು ಭೇಟಿಯಾಗಿ ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿದರು.
ರೈತರು ಎದುರಿಸುತ್ತಿರುವ ಸಂಕಷ್ಟದ ಕುರಿತು ಅರಣ್ಯ ಇಲಾಖೆ ಮತ್ತು ಸರ್ಕಾರ ಗಮನ ಹರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು. ಹುಲಿ ದಾಳಿಯನ್ನು ತಡೆಗಟ್ಟಲು ಶಾಶ್ವತ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ರೈತರ ಹಿತದೃಷ್ಟಿಯಿಂದ ಅಹೋರಾತ್ರಿ ಧರಣಿ ನಡೆಸಬೇಕಾಗುತ್ತದೆ ಎಂದು ಸಂಬAಧಪಟ್ಟ ಇಲಾಖೆ ಹಾಗೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.