ಕೋವರ್ಕೊಲ್ಲಿ ಇಂದ್ರೇಶ್
ಬೀದರ್, ನ. ೩: ದೇಶಾದ್ಯಂತ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಎಸ್ಐಆರ್ ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿ ವೋಟ್ ಚೋರಿಯ ಆರೋಪ ಹೊರಿಸಿ ಪ್ರತಿಭಟನೆಯನ್ನು ನಡೆಸುತ್ತಿವೆ. ಈ ನಡುವೆ ರಾಜ್ಯದಲ್ಲಿ ಇದೀಗ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಜನತೆಗೆ ಕೂಡ ಈ ಚುನಾವಣೆಯಿಂದಲೇ ಎಸ್ಐಆರ್ ಅನ್ವಯವಾಗುತ್ತಾ ಎನ್ನುವ ಪ್ರಶ್ನೆ ಎದುರಾಗಿದ್ದು ಇದೀಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಸಚಿವರ ಪ್ರಕಾರ ಹಳೆಯ ಮತದಾರರ ಪಟ್ಟಿ ಆಧರಿಸಿಯೇ ಚುನಾವಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ.
ಕಾನೂನಿನ ಪ್ರಕಾರ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಕೇಂದ್ರದ ಎಸ್ಐಆರ್ ನಂತರದ ದತ್ತಾಂಶ ಆಧಾರಿತ ಮತದಾರರ ಪಟ್ಟಿಯ ಬದಲಿಗೆ ಹಳೆಯ ಮತದಾರರ ಪಟ್ಟಿಯನ್ನೇ ಆಧರಿಸಿ ನಡೆಸಲೂ ಅವಕಾಶ ಇದೆ. ರಾಜ್ಯದಲ್ಲಿ ಸಿದ್ಧವಾಗಿರುವ ಹೊಸ ಎಸ್ಐಆರ್ ಮತದಾರರ ಪಟ್ಟಿ ಇನ್ನೂ ಅಧಿಕೃತವಾಗಿ ಸರ್ಕಾರದ ಕೈಸೇರಿಲ್ಲ. ಅಲ್ಲದೆ, ಪರಿಷ್ಕೃತ ಎಸ್ಐಆರ್ ಪಟ್ಟಿಯಿಂದ ಸಾವಿರಾರು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಎಲ್ಲಾ ಗೊಂದಲಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ಸಚಿವರ ಜತೆ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ನವೆಂಬರ್ ೫ ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಮೀಸಲಾತಿ ಪಟ್ಟಿಗೆ ಸಂಬAಧಿಸಿದAತೆ ಈಗಾಗಲೇ ಮೊದಲನೇ ಹಂತದ ಅಧಿಸೂಚನೆ ಹೊರಡಿಸಲಾಗಿದೆ. ಅ. ೧೯ ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಇತ್ತು, ೨,೨೦೦ ಆಕ್ಷೇಪಣೆಗಳು ಬಂದಿದ್ದು ಅಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ ಎಂದಿದ್ದಾರೆ.
ವಾರದ ಒಳಗಾಗಿ ಅಂತಿಮ ಹಂತದ ಅಧಿಸೂಚನೆ
ಇನ್ನೊಂದು ವಾರದ ಒಳಗಾಗಿ ಅಂತಿಮ ಹಂತದ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಚುನಾವಣೆ ಘೋಷಣೆ ಮಾಡುವುದು ರಾಜ್ಯ ಚುನಾವಣಾ ಆಯೋಗ ಮತ್ತು ಮೀಸಲಾತಿ ಘೋಷಣೆ ಮಾಡುವುದು ಸರ್ಕಾರ. ಹೀಗಾಗಿ, ಕೆಲವು ಪ್ರಕ್ರಿಯೆಗಳ ನಂತರ ಡಿಸೆಂಬರ್ ೧೫ ರ ನಂತರ ಯಾವುದೇ ದಿನ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ
ಮೀಸಲಾತಿ ಪಟ್ಟಿ ಅಂತಿಮ
ಈ ತಿಂಗಳೊಳಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸುತ್ತೇವೆ. ಚುನಾವಣಾ ಆಯೋಗ, ಚುನಾವಣೆ ದಿನಾಂಕ, ವೇಳಾಪಟ್ಟಿ ಘೋಷಣೆ ಮಾಡಲಿದೆ. ಬ್ಯಾಲೆಟ್ ಬಾಕ್ಸ್ ಸೇರಿದಂತೆ ಎಲ್ಲಾ ತಯಾರಿ ಮಾಡಲು ಚುನಾವಣಾ ಆಯೋಗಕ್ಕೆ ಸಮಯಬೇಕು ಎಂದು ತಿಳಿಸಿದರು. ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಡಿಸೆಂಬರ್ನಲ್ಲಿ ಅಧಿಸೂಚನೆ ಹೊರಡಿಸಿ ಜನವರಿ ಮೊದಲ ವಾರದಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಎಲೆಕ್ಷನ್ಗೆ ೩ ತಿಂಗಳಷ್ಟೆ ಬಾಕಿ ಇದ್ದು, ಸಿದ್ದತೆ ಜೋರಾಗಲಿದೆ. ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರದ ಚರ್ಚೆ ಗರಿಗೆದರಲಿದೆ.
ಇವಿಎಂ ಬದಲಿಗೆ ಬ್ಯಾಲೆಟ್ ಬಾಕ್ಸ್
ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತಾವಧಿ ಮುಗಿದಿದ್ದು, ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಈ ಹಿಂದೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದರು. ಅಲ್ಲದೇ ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಮತಪೆಟ್ಟಿಗೆಗಳನ್ನು (ಬ್ಯಾಲೆಟ್ ಬಾಕ್ಸ್) ಬಳಸಲು ಪಂಚಾಯತ್ ರಾಜ್ ಕಾಯ್ದೆಗೂ ತಿದ್ದುಪಡಿ ತರಲಾಗಿದೆ.