ಮಡಿಕೇರಿ, ನ. ೩: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ೨೦೨೬’ ಮೂಲತಃ ಕೊಡಗಿನವರಾದ ಡಿಆರ್ಡಿಓ ಇದರ ಮುಖ್ಯ ಸಂಪರ್ಕ ಅಧಿಕಾರಿಯಾಗಿದ್ದ ಮೈಸೂರಿನ ಜಯಪ್ರಕಾಶ್ ಪುತ್ತೂರು (ಅನುವಾದ ಸಾಹಿತ್ಯ) ಇವರಿಗೆ ಲಭಿಸಿದೆ.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ತಾ. ೮ ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕ, ನಗದು ೫,೦೦೦ ದೊಂದಿಗೆ ‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ೨೦೨೬’ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿ ಸಂಧ್ಯಾ ಶೆಣೈ ಉಡುಪಿ ತಿಳಿಸಿದ್ದಾರೆ.