ಸಿದ್ದಾಪುರ, ನ. ೩: ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಲಿಯಂಗಾಡ ಗ್ರಾಮದಲ್ಲಿ ಮತ್ತೆ ಹುಲಿ ಹೆಜ್ಜೆ ಪತ್ತೆಯಾಗಿದ್ದು ಗ್ರಾಮಸ್ಥರು ಆತಂಕಕ್ಕೆ ಸಿಲುಕಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಹಾಲುಗುಂದ ಗ್ರಾಮದ ಕೊಂಡAಗೇರಿ ಗ್ರಾಮದ ಇಲಿಯಂಗಾಡ ಗ್ರಾಮದಲ್ಲಿ ಮಹಮ್ಮದ್ ಅಲಿ ಎಂಬವರಿಗೆ ಸೇರಿದ ಕೋಣವನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿತ್ತು. ಇದೀಗ ಮತ್ತೆ ಮಂಗಳವಾರದAದು ಹುಲಿ ಹೆಜ್ಜೆ ಕಂಡುಬAದಿದ್ದು ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ಮನೋಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. - ವಾಸು