ಕುಶಾಲನಗರ, ನ. ೪: ರಸ್ತೆ ದಾಟುತ್ತಿದ್ದ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಕುಶಾಲನಗರ ಇಂದಿರಾ ಬಡಾವಣೆಯ ಮಹಿಳೆ ತಾಜ್ (೫೮) ಎಂಬವರು ಮೃತಪಟ್ಟ ದುರ್ದೈವಿ.

ತರಕಾರಿ ಖರೀದಿಸಲು ಮನೆಯಿಂದ ಪಟ್ಟಣಕ್ಕೆ ಬರುತ್ತಿದ್ದ ಸಂದರ್ಭ ಕುಶಾಲನಗರ ಮಡಿಕೇರಿ ರಸ್ತೆಯ ಬೈಚನಹಳ್ಳಿ ಬಳಿ ಘಟನೆ ನಡೆದಿದೆ.

ಕುಶಾಲನಗರದಿಂದ ಗುಡ್ಡೆ ಹೊಸೂರು ಕಡೆಗೆ ತೆರಳುತ್ತಿದ್ದ ಬೈಕ್ (ಏಂ ೧೨ಙ೬೫೩೫) ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿಯಾದ ಕಾರಣ ರಸ್ತೆಗೆ ಬಿದ್ದ ಮಹಿಳೆಯ ತಲೆಗೆ ತೀವ್ರ ಗಾಯವಾಗಿದೆ.

ತಕ್ಷಣ ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿಗೆ ಸಾಗಿಸುತ್ತಿದ್ದ ವೇಳೆ ಪಿರಿಯಾಪಟ್ಟಣ ಮಾರ್ಗ ಮಧ್ಯೆ ಮಹಿಳೆ ಮೃತಪಟ್ಟಿರುವುದಾಗಿ ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಗೀತಾ ತಿಳಿಸಿದ್ದಾರೆ. ಘಟನೆಗೆ ಸಂಬAಧಿಸಿದAತೆ ಬೈಕ್ ಸವಾರ ಗುಡ್ಡೆಹೊಸೂರು ಶ್ರೀಕಾಂತ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಮೊಕದ್ದಮೆ ದಾಖಲಿಸಿದ್ದಾರೆ. ಮೃತ ಮಹಿಳೆ ಓರ್ವ ಪುತ್ರ ಓರ್ವ ಪುತ್ರಿಯನ್ನು ಅಗಲಿದ್ದಾರೆ.