ಕೂಡಿಗೆ, ನ. ೪: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ), ಸರಕಾರಿ ಪದವಿಪೂರ್ವ ಕಾಲೇಜು ಕೂಡಿಗೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ತಾ. ೫ ರಂದು ನಡೆಯಲಿದೆ.
ಕ್ರೀಡಾಕೂಟದ ಉದ್ಘಾಟನೆ ಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯ ಚಕ್ರವರ್ತಿ ನೆರವೇರಿಸುವರು. ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್ ವಹಿಸುವರು. ಮುಖ್ಯ ಅತಿಥಿಗಳಾಗಿ ಗುಡ್ಡೆಹೊಸೂರುವಿನ ಐಶ್ವರ್ಯ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ, ಕುಶಾಲನಗರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎA. ಚರಣ್, ಉದ್ಯಮಿ ಸುದೀಪ್ ಕುಮಾರ್ ಸೇರಿದಂತೆ ಹಲವು ಮಂದಿ ಅಗಮಿಸುವರು ಎಂದು ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ತಿಳಿಸಿದ್ದಾರೆ.