ಮಡಿಕೇರಿ, ನ. ೪: ಬೆಂಗಳೂರಿನಲ್ಲಿ ನಾಟಕ ಪ್ರದರ್ಶನ ವಿಚಾರಕ್ಕೆ ಸಂಬAಧಿಸಿದAತೆ ಕೊಡಗಿನ ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ಅವರಿಗೆ ಮಸಿ ಬಳಿದು, ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಕೃತ್ಯವನ್ನು ವೀರಾಜಪೇಟೆ ಮಂಡಲ ಬಿಜೆಪಿ ಖಂಡಿಸಿದೆ.

ಇದು ಅಭಿವ್ಯಕ್ತಿ ಸ್ವಾತಂತ್ರö್ಯದ ಉಲ್ಲಂಘನೆಯಾಗಿದೆ. ಹೀನಕೃತ್ಯ ಸರಿಯಲ್ಲ ಎಂದು ಪಕ್ಷದ ಕಚೇರಿಯಲ್ಲಿ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖಂಡನೆ ವ್ಯಕ್ತಪಡಿಸಿ ಕೃತ್ಯವೆಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು. ಸಭೆಯಲ್ಲಿ ಪ್ರಮುಖರಾದ ಜಿಲ್ಲಾ ಬಿಜೆಪಿ ವಕ್ತಾರ ಮಾಚಿಮಾಡ ರವೀಂದ್ರ, ಕಿಲನ್ ಗಣಪತಿ, ಮುದ್ದಿಯಡ ಮಂಜು, ಕುಂಞAಗಡ ಅರುಣ್ ಭೀಮಯ್ಯ, ಕುಟ್ಟಂಡ ಅಜಿತ್ ಕರುಂಬಯ್ಯ ಮತ್ತಿತರರು ಹಾಜರಿದ್ದರು.

ಬಿಜೆಪಿ ರೈತ ಮೋರ್ಚಾ ಖಂಡನೆ

ವೀರಾಜಪೇಟೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕöÈತ, ಖ್ಯಾತ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರಿಗೆ ಬೆಂಗಳೂರಿನಲ್ಲಿ ಮಸಿ ಬಳಿದ ಘಟನೆಯನ್ನು ಖಂಡಿಸುವುದಾಗಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವಿಚಾರ, ಭಿನ್ನಾಭಿಪ್ರಾಯ ಮತ್ತು ಟೀಕೆಗಳಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಆದರೆ ಅವುಗಳನ್ನು ವ್ಯಕ್ತಪಡಿಸುವುದಕ್ಕೆ ಪ್ರಜಾಸತ್ತಾತ್ಮಕ ಮಾರ್ಗಗಳಿವೆ. ಕಲಾವಿದರ ಮೇಲೆ ಇಂತಹ ಕೃತ್ಯಗಳ ಮೂಲಕ ದಾಳಿ ನಡೆಸುವುದು ಒಪ್ಪತಕ್ಕದ್ದಲ್ಲ. ಕಲಾವಿದರಿಗೆ ಗೌರವ ನೀಡುವುದು ನಮ್ಮ ಸಂಸ್ಕöÈತಿ ಮತ್ತು ಸಮಾಜದ ಜವಾಬ್ದಾರಿ. ಇಂತಹ ಘಟನೆಗಳು ಮರುಕಳಿಸದಂತೆ ಸಂಬAಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆಯ ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.