ಸಿದ್ದಾಪುರ, ನ. ೪: ಚುನಾವಣಾ ಪ್ರಚಾರದ ಭಾಷಣದವೇಳೆ ಎ.ಎಸ್. ಪೊನ್ನಣ್ಣ ಅವರ ವಿರುದ್ಧ ಭಾಷಣ ಮಾಡಿದ ಆರೋಪಕ್ಕೆ ಸಂಬAಧಿಸಿದAತೆ, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರನ್ನು ವೀರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯ ಆರೋಪಗಳಿಂದ ಬಿಡುಗಡೆಗೊಳಿಸಿ ಆದೇಶಿಸಿದೆ.
೨೦೨೩ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ ೩೦ರಂದು ಮಾಲ್ದಾರೆ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ, ಸ್ಪರ್ಧಾ ಅಭ್ಯರ್ಥಿಯಾಗಿದ್ದ ಎ.ಎಸ್. ಪೊನ್ನಣ್ಣ ಅವರ ಕುರಿತು ಅವಹೇಳನಕಾರಿಯಾಗಿ ಕಾರ್ಯಪ್ಪ ಭಾಷಣ ಮಾಡಿದ್ದರು ಎಂಬುದು ಆರೋಪವಾಗಿತ್ತು. ಈ ಭಾಷಣದಿಂದ ಅಭ್ಯರ್ಥಿಯ ಪ್ರತಿಷ್ಠೆಗೆ ಧಕ್ಕೆ ತರುವುದರೊಂದಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ದೂರಲಾಗಿತ್ತು. ಈ ಸಂಬAಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೧೭೧ಜಿ ಮತ್ತು ೫೦೫(೨) ಅಡಿಯಲ್ಲಿ ಪ್ರಕರಣ ದಾಖಲಿಸಿ, ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶ್ವನಾಥ್ ಎ. ಅವರು, ಆರೋಪಿತನ ಹೇಳಿಕೆ ಉದ್ದೇಶಪೂರ್ವಕವಾಗಿ ಸುಳ್ಳಾಗಿತ್ತು ಅಥವಾ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಉದ್ದೇಶ ಹೊಂದಿತ್ತು ಎಂಬುದಕ್ಕೆ ಸೂಕ್ತ ದಾಖಲೆಗಳಿಲ್ಲ ಎಂದು ಅಭಿಪ್ರಾಯಪಟ್ಟರು. ಅಲ್ಲದೆ, ವಿವಿಧ ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ದ್ವೇಷ ಬೆಳೆಸುವ ಉದ್ದೇಶವೂ ದಾಖಲೆಗಳಿಂದ ಸಾಬೀತಾಗಿಲ್ಲ ಎಂದು ತಿಳಿಸಿದರು. ಹೀಗಾಗಿ ಆರೋಪಗಳು ಆಧಾರರಹಿತವಾಗಿವೆ ಎಂದು ಪರಿಗಣಿಸಿ, ಆರೋಪಿ ಪರ ವಕೀಲರಾದ ಎನ್.ಎಸ್. ಪ್ರಶಾಂತ್ ರವರು ನೀಡಿದ ಅರ್ಜಿಯನ್ನು ಅಂಗೀಕರಿಸಿ ಅ. ೩೧ರಂದು ಬಿಡುಗಡೆ ಆದೇಶ ಹೊರಡಿಸಿದರು.