ಮಡಿಕೇರಿ, ನ. ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ೨೦೨೬ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ ೧೯೮೬ ತಿದ್ದುಪಡಿ ೧೯೯೯ ಮತ್ತು ೨೦೦೦ ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ಕೋರಿದೆ:
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ವಾಡಿಕೆಯಾಗಿರುತ್ತದೆ. ಪಟಾಕಿ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಪಟಾಕಿಯಲ್ಲಿ ಬಳಸುವ ರಾಸಾಯನಿಕಗಳು ಸ್ಫೋಟ ಆಗುವ ಗುಣಗಳನ್ನು ಹೊಂದಿರುತ್ತದೆ. ಪಟಾಕಿ ಸಿಡಿಸಿದ ಮೇಲೆ ಅದರಿಂದ ಬಿಡುಗಡೆಯಾಗುವ ರಾಸಾಯನಿಕ ವಸ್ತುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.
ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿರುತ್ತದೆ.
ಆದರೆ ಇತ್ತೀಚಿನ ದಿನಗಳಲ್ಲಿ ಆಧುನಿಕ ಭರಾಟೆಯಲ್ಲಿ ಪಟಾಕಿಗಳನ್ನು ಸಿಡಿಸುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ರೀತಿ ಪಟಾಕಿಗಳನ್ನು ಸಿಡಿಸುವುದರಿಂದ ವಾಯು ಮಾಲಿನ್ಯವು ಹೆಚ್ಚಾಗುವುದಲ್ಲದೇ ಹೆಚ್ಚಾದ ಶಬ್ಧ ಮಾಲಿನ್ಯದಿಂದ ಮನುಷ್ಯನ ಮತ್ತು ಜೀವ ಸಂಕಲನದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿರುವುದು ದೇಶದಾದ್ಯಂತ ನಡೆಸಿದ ಅಧ್ಯಯನದಿಂದ ಸಾಬೀತಾಗಿದೆ. ೨೦೧೮ರ ರಾಷ್ಟಿçÃಯ ಹಸಿರು ಪ್ರಾಧಿಕಾರದ ಆದೇಶದಂತೆ ಸಿಎಸ್ಐಆರ್-ಎನ್ಇಇಆರ್ಐ ಇವರು ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಲಯವು ದಿ: ೨೩.೧೦.೨೦೧೮ ಮತ್ತು ೩೧.೧೦.೨೦೧೮ ಹಾಗೂ ತದನಂತರ ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ.
೨೦೨೬ರ ದೀಪಾವಳಿ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ಧ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕ್ರಮಜರುಗಿಸಲು ಸೂಚಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮು ಸಂಬAಧಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು.
೧೨೫ ಡೆಸಿಬಲ್ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಸಮಯ ರಾತ್ರಿ ೮ ಗಂಟೆಯಿAದ ರಾತ್ರಿ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ.
ಸರ್ವೋಚ್ಛ ನ್ಯಾಯಾಲಯ ಹಾಗೂ ಹಸಿರು ನ್ಯಾಯ ಪೀಠ-ನವದೆಹಲಿ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡಬೇಕಿದೆ.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಅವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದÀAತೆ ಬಳಸಬೇಕು.
ಹಸಿರು ಪಟಾಕಿ ಅಂಗಡಿಗಳಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಬ್ಯಾಗ್ಗಳನ್ನು ಬಳಸುವಂತಿಲ್ಲ. ದಿನದ ಯಾವುದೇ ಸಮಯದಲ್ಲಿ ನಿಶಬ್ಧವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬAದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ.
ಟಿ.ಜಿ. ಪ್ರೇಮ್ಕುಮಾರ್ ಮನವಿ:
ವಿಷಪೂರಿತ ಹೊಗೆ ಸೂಸುವ ಮಾಲಿನ್ಯಕಾರಿ ಪಟಾಕಿಗಳ ಬದಲಿಗೆ ಸರ್ಕಾರದ ನಿಯಮಗಳಿಗೆ ಅನುಗುಣವಾಗಿರುವ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ ಮಾಲಿನ್ಯಮುಕ್ತ ದೀಪಾವಳಿ ಆಚರಿಸುವ ಕುರಿತು ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದ್ದಾರೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ವತಿಯಿಂದ ದೇಶಾದಾದ್ಯಂತ ಅಕ್ಟೋಬರ್ ೨೦ ರಿಂದ ನವೆಂಬರ್ ೮ ರವರೆಗೆ ಹಸಿರು ದೀಪಾವಳಿ ಅಭಿಯಾನ ಆಚರಿಸಲಾಗುತ್ತಿದೆ. ಅದರಂತೆ ರಾಜ್ಯದಲ್ಲೂ ಕೂಡ ಜಿಲ್ಲಾಡಳಿತಗಳ ಮೂಲಕ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹಸಿರು ದೀಪಾವಳಿ ಆಚರಣೆ ಬಗ್ಗೆ ಜನಜಾಗೃತಿಗೆ ಕ್ರಮವಹಿಸಲಾಗಿದೆ.
ಅತಿಯಾದ ಮತ್ತು ವಿಷಾನಿಲ ಹೊರಸೂಸುವ ಮಾಲಿನ್ಯಕಾರಿ ಪಟಾಕಿಗಳ ಬಳಕೆಯು ಮಕ್ಕಳು, ಹಿರಿಯ ನಾಗರಿಕರು, ಉಸಿರಾಟದ ಸಮಸ್ಯೆ ಹೊಂದಿರುವ ವ್ಯಕ್ತಿಗಳು, ಪ್ರಾಣಿಗಳು ಮತ್ತು ಪಕ್ಷಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಾಯು ಮತ್ತು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.