ಮಡಿಕೇರಿ, ನ. ೬: ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/seಡಿviಛಿes
ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು, ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಮತ್ತು ಕುರಿ ಸಾಕಾಣಿಕೆ ಉದ್ದೇಶಗಳಿಗೆ (ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹೊರತು ಪಡಿಸಿ) ನಿಗಮಗಳಿಂದ ನೇರ ಸಾಲ ಗರಿಷ್ಠ ವೆಚ್ಚ ರೂ.೧ ಲಕ್ಷ, ಅದರಲ್ಲಿ ಶೇ.೫೦ ಸಾಲ ಮತ್ತು ಶೇ.೫೦ ಸಹಾಯಧನ (ಶೇಕಡ ೪ರಷ್ಟು ಬಡ್ಡಿ ದರ)
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ: (ಬ್ಯಾಂಕುಗಳ ಸಹಯೋಗದೊಂದಿಗೆ) ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ (ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹೊರತು ಪಡಿಸಿ) ಘಟಕ ವೆಚ್ಚದ ಶೇ೫೦.ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.೧.೨೫ ಲಕ್ಷ, ಇತರೆ ಉದ್ದೇಶ: ಸಣ್ಣ ಕೈಗಾರಿಕೆ, ಸೇವಾ ಕ್ಷೇತ್ರ, ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಘಟಕ ವೆಚ್ಚದ ಶೇ.೭೦ ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.೨ ಲಕ್ಷ.
ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.೭೫ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೪ ಲಕ್ಷ. ಫುಡ್ ಟ್ರಕ್ ಟ್ರೆöÊಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಉದ್ದೇಶಕ್ಕೆ. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹೊರತು ಪಡಿಸಿ), ಘಟಕ ವೆಚ್ಚದ ಶೇ.೭೫ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೪ ಲಕ್ಷ.
ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು): ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ ೧೦ ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.೫ ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.೨.೫೦ ಲಕ್ಷ ಸಹಾಯಧನ ಮತ್ತು ರೂ.೨.೫೦ ಲಕ್ಷ ಸಾಲ. (ಶೇಕಡ ೪ರಷ್ಟು ಬಡ್ಡಿ ದರ).
ಗಂಗಾ ಕಲ್ಯಾಣ ಯೋಜನೆ: ೧ ಎಕರೆಯಿಂದ ೫ ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ. ೩.೭೫ ಲಕ್ಷ (ಇದರಲ್ಲಿ ರೂ.೫೦ ಸಾವಿರ ಸಾಲವೂ ಸೇರಿರುತ್ತದೆ).
ಭೂ ಒಡೆತನ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಎಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ. ೨೦ ಲಕ್ಷ ಸಹಾಯಧನ ಶೇ.೫೦, ಸಾಲ ಶೇ.೫೦ (ಶೇಕಡ ೪ರಷ್ಟು ಬಡ್ಡಿದರ).
ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ ಮೂಲಕ ಪಡೆದುಕೊಳ್ಳುವುದು. ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ hಣಣಠಿs://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ: hಣಣಠಿs://ಚಿಜiರಿಚಿmbಚಿvಚಿ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: hಣಣಠಿs://ತಿತಿತಿ.ಞbಜಛಿ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ: hಣಣಠಿs://ಞssಞsಛಿ.ಞಚಿಡಿ.ಟಿiಛಿ.iಟಿ/, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ hಣಣಠಿs://ಞಣಜಛಿ.ಞಚಿಡಿಟಿಚಿಣಚಿಞಚಿ.gov.iಟಿ. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/seಡಿviಛಿes ಮೂಲಕ ಅಪ್ಲೋಡ್ ಮಾಡಿ ಅರ್ಜಿಯನ್ನು ನವೆಂಬರ್ ೩೦ ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ ೫೭೧೨೦೧ ದೂ.ಸಂ. ೮೦೫೦೮೫೪೦೬೧ ಅನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.