ಮಡಿಕೇರಿ, ನ. ೯: ಪ್ರಸಕ್ತ (೨೦೨೬-೨೭) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಗಳು ಹಾಗೂ ಪ್ರವರ್ಗ-೧ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್, ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/

ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡ ಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ, ದೂರವಾಣಿ ಸಂಖ್ಯೆ:೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಜಿ.ಬಿಲಾಲ್ ಅವರು ತಿಳಿಸಿದ್ದಾರೆ.