ಮಡಿಕೇರಿ, ನ. ೯: ಕೊಡಗು ವಿಶ್ವವಿದ್ಯಾಲಯದ ನೂತನ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಭಾರತಿ ಹಿರೇಮಠ ಅವರು ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯವಾದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿಗೆ ಮೊಟ್ಟಮೊದಲ ಬಾರಿಗೆ ಭೇಟಿ ನೀಡಿ, ಸಂಶೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪರೀಕ್ಷಾ ಮೂಲಸೌಕರ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಮುಂದಿನ ದಿನಗಳಲ್ಲಿ ಮಹಾವಿದ್ಯಾಲಯಗಳಿಂದ ಮೌಲ್ಯಮಾಪನ ವಿಭಾಗದ ಸಂಪೂರ್ಣ ಪ್ರಗತಿಗೆ ಸಹಕಾರವನ್ನು ಕೋರಿದರು.

ಈ ಸಂದರ್ಭ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಮೇಜರ್ ರಾಘವ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯೊAದಿಗೆ ಸಂವಾದವನ್ನು ನಡೆಸಿದರು.