ಪಾಲಿಬೆಟ್ಟ, ನ. ೧೧: ಮಡಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ ೧೭ರ ವಯೋಮಿತಿ ಒಳಗಿನ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಪಾಲಿಬೆಟ್ಟದ ವಿದ್ಯಾರ್ಥಿ ಗಿಲನ್ ಅಯ್ಯಪ್ಪ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಣ ಶಿಕ್ಷಕ ಮದನ್ ಕುಮಾರ್ ತರಬೇತಿ ನೀಡಿದ್ದಾರೆ.