Áಪೋಕ್ಲು, ನ. ೧೧: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್‌ಡಿಎಂಸಿ ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ಭಾಗವಹಿಸಿದ್ದರು. ಈ ಸಂದರ್ಭ ಮೂಲಭೂತ ಸೌಲಭ್ಯಕ್ಕೆ ಸಂಬAಧಿಸಿದAತೆ ಸಲ್ಲಿಸಿದ ಬೇಡಿಕೆಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿ ಹಲವು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲ ಮಾಧ್ಯಮಕ್ಕೆ ಸರ್ಕಾರಿ ಅನುಮತಿ ದೊರೆತಿಲ್ಲ. ಅನುಮತಿ ಬಂದ ನಂತರ ಪೂರ್ಣ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಸಭೆಯಲ್ಲಿ ಶೈಕ್ಷಣಿಕವಾಗಿ ಹಲವಾರು ವಿಚಾರಗಳನ್ನು ಚರ್ಚಿಸ ಲಾಯಿತು.

ಶಾಲೆಗೆ ಬಿಸಿ ಊಟ ಕೊಠಡಿ, ವಿದ್ಯಾರ್ಥಿಗಳು ಕುಳಿತು ಊಟ ಮಾಡಲು ಭೋಜನಾಲಯವನ್ನು ನಿರ್ಮಿಸಿಕೊಡಲು, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲು ಹಾಗೂ ಶಾಲೆಯ ಸುತ್ತ ತಂತಿ ಬೇಲಿ ಹಾಕಿಸುವ ಭರವಸೆ ನೀಡಿದರು. ಮಡಿಕೇರಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ ಉಪಸ್ಥಿತಿಯಲ್ಲಿ ಹಲವಾರು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲಾಯಿತು..

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಡಿಕೇರಿಯಿಂದ ನಾಪೋಕ್ಲುವಿಗೆ ಬೆಳಿಗ್ಗೆ ೮.೩೦ ಕ್ಕೆ ಹಾಗೂ ನಾಪೋಕ್ಲುವಿನಿಂದ ಮಡಿಕೇರಿಗೆ ಸಂಜೆ ೪.೩೦ಕ್ಕೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸಲು ಈ ಸಂದರ್ಭ ಶಾಸಕರಿಗೆ ಮನವಿ ಸಲ್ಲಿಸಲಾಯಿತು.. ಸಂಸ್ಥೆಯ ಪ್ರಾಂಶುಪಾಲರಾದ ವಿಶಾಲ, ಉಪ ಪ್ರಾಂಶುಪಾಲರಾದ ಶಿವಣ್ಣ ಎಂ.ಎಸ್, ಎಸ್‌ಡಿಎಂಸಿಯ ಉಪಾಧ್ಯಕ್ಷ ಎಸ್ ಉದಯಶಂಕರ್, ಸದಸ್ಯರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.