ಪೊನ್ನಂಪೇಟೆ, ನ. ೧೧: ಪೊನ್ನಂಪೇಟೆ ಸಮೀಪದ ಮುಗುಟಗೇರಿ ಗ್ರಾಮದ ಗದ್ದೆ ಬದಿಯಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ತಾ. ೧೦ ರಂದು ಅಲ್ಲಿನ ನಿವಾಸಿ ಮುದ್ದಿಯಡ ಗಣೇಶ್ ಅವರ ಮನೆಯ ಸಮೀಪದ ಗದ್ದೆಯಲ್ಲಿ ಹುಲಿ ಸಂಚರಿಸಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿವೆ.

ಸ್ಥಳಕ್ಕೆ ಪೊನ್ನಂಪೇಟೆ ಅರಣ್ಯ ವಲಯ ಡಿಆರ್‌ಎಫ್‌ಒ ದಿವಾಕರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಹುಲಿಯ ಹೆಜ್ಜೆ ಗುರುತುಗಳನ್ನು ಖಚಿತಪಡಿಸಿದ್ದಾರೆ. ಅರಣ್ಯ ಇಲಾಖೆಯವರು ಕೂಡಲೇ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ದಿವಾಕರ್ ಹುಲಿಯ ಚಲನವಲನಗಳನ್ನು ಗಮನಿಸಲಾಗುತ್ತಿದ್ದು ಅದರ ಇರುವಿಕೆಯ ಖಚಿತ ಜಾಗವನ್ನು ಗುರುತಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

- ಚನ್ನನಾಯಕ