ಪೊನ್ನಂಪೇಟೆ, ನ. ೧೧: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕೊಡಗು ಜಿಲ್ಲೆ ಇವರ ಆಶ್ರಯದಲ್ಲಿ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಥ್ರೋಬಾಲ್ ಹಾಗೂ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪದ ಸರ್ವದೈವತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗಳು ಸಾಧನೆ ಮಾಡಿದ್ದಾರೆ.
ಬಾಲಕರ ಥ್ರೋ ಬಾಲ್ ತಂಡ ಪ್ರಥಮ ಸ್ಥಾನ ಪಡೆದು ಸತತ ನಾಲ್ಕನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ ಯಾಗುವ ಮೂಲಕ ವಿಶೇಷ ಸಾಧನೆ ಮಾಡಿದೆ.
ಬಾಲಕಿಯರ ಥ್ರೋ ಬಾಲ್ ತಂಡ ಪ್ರಥಮ ಸ್ಥಾನಗಳಿಸಿ ಮೂರನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಾಲಿಬಾಲ್ ತಂಡವೂ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿಗೆ ಕೊಡಗು ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸುವ ಅರ್ಹತೆ ಗಳಿಸಿದೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕ ಪ್ರಮೋದ್ ಗೌಡ ತರಬೇತಿ ನೀಡಿದ್ದಾರೆ.