ಪೊನ್ನAಪೇಟೆ, ನ. ೧೧: ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೇಸಿಕ್ ಸೈನ್ಸ್ ಆಂಡ್ ಹ್ಯೂಮ್ಯಾನಿಟೀಸ್ ವಿಭಾಗದ ವತಿಯಿಂದ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ “ವಿಕಸಿತ ಭಾರತ ಯುವ ಸಂವಾದ: ನಿಮ್ಮ ಮತ - ನಿಮ್ಮ ಹಕ್ಕು” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅತಿಥಿ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೈ ಭಾರತ್ ರಾಯಭಾರಿ ವರುಣ್ ಆರ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್), ಪ್ರಜಾಪ್ರಭುತ್ವದ ಮಹತ್ವ ಹಾಗೂ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ನಿರ್ಧಾರಗಳನ್ನು ಕೈಗೊಳ್ಳುವಾಗ ಅಭಿಪ್ರಾಯಗಳಿಗಿಂತ ವಾಸ್ತವಾಂಶಗಳಿಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.
ಇದೇ ಸಂದರ್ಭ ಎಐ ಹಾಗೂ ಎಂಎಲ್ ಇಂಜಿನಿಯರಿAಗ್ ವಿಭಾಗದ ವಿದ್ಯಾರ್ಥಿ ಪ್ರತಿನಿಧಿ ಮೋಕ್ಷ ಮಾಚಮ್ಮ ಅವರು ಪ್ರಜಾಸತಾತ್ಮಕ ಪ್ರತಿಜ್ಞೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಅಖಿಲ್ ಪಿ. ಹಾಗೂ ಸಿಐಟಿಯ ಪ್ರಾಂಶುಪಾಲರಾದ ಡಾ. ಎಂ ಬಸವರಾಜ್ ಉಪಸ್ಥಿತರಿದ್ದರು. ಸಂವಾದಾತ್ಮಕವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಬAಧಿಸಿದ ವಿವಿಧ ಪ್ರಶ್ನೆಗಳನ್ನು ಕೇಳಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು. ಬೇಸಿಕ್ ಸೈನ್ಸ್ ಆಂಡ್ ಹ್ಯೂಮ್ಯಾನಿಟೀಸ್ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.