ಕುಶಾಲನಗರ, ನ ೧೨: ತಾ. ೧೫ ರಂದು ಕುಶಾಲನಗರದ ವಾಸವಿ ಮಹಲ್ ಸಭಾಂಗಣದಲ್ಲಿ ಬಿರ್ಸಾ ಮುಂಡಾ ರವರ ೧೫೧ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್.ಟಿ.ಮೋರ್ಚಾ ಅಧ್ಯಕ್ಷ ಎಂ.ಎA.ಪರಮೇಶ್ವರ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಬಿಜೆಪಿ ಎಸ್.ಟಿ.ಮೋರ್ಚಾ ಆಶ್ರಯದಲ್ಲಿ ಅಂದು ಬೆಳಿÀಗ್ಗೆ ೧೧ ಗಂಟೆಗೆ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ ಮಾತನಾಡಿ, ಬಿರ್ಸಾ ಮುಂಡಾ ಅವರ ಕೊಡುಗೆಯ ಬಗ್ಗೆ ಆದಿವಾಸಿ ಸಮುದಾಯ ಅರಿತುಕೊಳ್ಳಬೇಕಿದೆ. ಆದಿವಾಸಿಗಳ ಹಕ್ಕಿಗಾಗಿ ಹೋರಾಟ ನಡೆಸಿ ತ್ಯಾಗ ಬಲಿದಾನಗೈದ ಹೋರಾಟಗಾರ, ಬುಡಕಟ್ಟು ಜನರಿಗಾಗಿ ಜೀವನ ಅರ್ಪಿಸಿದ ಬಿರ್ಸಾ ಮುಂಡಾ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಎಸ್.ಟಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಆರ್. ಪ್ರಭಾಕರ್ ಮಾತನಾಡಿ, ಅಂದಿನ ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ವೀರಾಜಪೇಟೆ ಮಂಡಲ ಎಸ್.ಟಿ.ಮೋರ್ಚಾ ಅಧ್ಯಕ್ಷ ಮುತ್ತುರಾಜ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಮಲ್ಲೇಶ್ ಇದ್ದರು.