ಕುಶಾಲನಗರ, ನ. ೧೨: ಮೈಸೂರು ವಿಭಾಗ ಮಟ್ಟದ ಬಾಲಕ, ಬಾಲಕಿಯರ ಬ್ಯಾಂಡ್ ಸ್ಪರ್ಧೆಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.

ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕುಶಾಲನಗರ ಫಾತಿಮಾ ಪ್ರೌಢಶಾಲೆಯ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬ್ಯಾಂಡ್ ಸ್ಪರ್ಧೆ ಹಿನ್ನೆಲೆಯಲ್ಲಿ ತಂಡದ ಸದಸ್ಯರು ಕುಶಾಲನಗರ ಪಟ್ಟಣದಲ್ಲಿ ಮೆರವಣಿಗೆ ತೆರಳಿದರು. ಈ ಸಂದರ್ಭ ಮೆರವಣಿಗೆಗೆ ಚಾಲನೆ ನೀಡಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ವಿಭಾಗಮಟ್ಟದ ೫ ಬಾಲಕರ ತಂಡ ಮತ್ತು ೨ ಬಾಲಕಿಯರ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿವೆ, ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಫಾತಿಮಾ ಪ್ರೌಢಶಾಲೆ ವ್ಯವಸ್ಥಾಪಕ ಫಾದರ್ ಜ್ಞಾನಪ್ರಕಾಶ್, ಹೆಬ್ಬಾಲೆ ರಂಜನ್, ಇರ್ಫಾನ್, ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.