ಸುಂಟಿಕೊಪ್ಪ, ನ. ೧೨: ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿವಂಗತ ಶ್ರೀ. ಸಾಯಿನಾಥ್ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಬಾಸ್ಟಿನ್ ಅವರು ಮಾತನಾಡಿ, ಸಾಹಿತ್ಯ ಕ್ಷೇತ್ರಕ್ಕೂ ಸುಂಟಿಕೊಪ್ಪಕ್ಕೂ ಅವಿನಾಭವ ಸಂಬAಧವಿದೆ. ದೇಶಕ್ಕೆ ಸ್ವಾತಂತ್ರö್ಯ ಹೋರಾಟಗಾರರಲ್ಲಿ ಪ್ರಮುಖರಾದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಹೆಸರಾಂತ ಕವಿ ಮಹಾಶಯರುಗಳಾದ ರಾಷ್ಟçಕವಿ ಕುವೆಂಪು, ದರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಶಿವರಾಮ ಕಾರಂತರು ಕನ್ನಡ ವೃತ್ತದ ಮೂಲಕ ನಡೆದಾಡಿರುವುದು ಹೆಮ್ಮೆಯ ವಿಷಯ ಎಂದರು.

ಸಾಹಿತಿ ಹಾಗೂ ರಾಷ್ಟಿçÃಯ ಯುವಪ್ರಶಸ್ತಿಗೆ ಭಾಜನರಾಗಿರುವ ಸುಂಟಿಕೊಪ್ಪ ಪ್ರಾಥಮಿಕ ಶಾಲೆಯ ಶಿಕ್ಷಕ ಸತೀಶ್ ಕಾಜೂರು ಅವರ ಕವನ ಒಂದು ವಿಶ್ವ ವಿದ್ಯಾನಿಲಯದ ಪಠ್ಯ ಪುಸ್ತಕದಲ್ಲಿ ಅಳವಡಿಕೆಯಾಗಿರುವುದು ಸಾಧನೆ ಎಂದು ಬಣ್ಣಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ವಹಿಸಿದ್ದರು. ದತ್ತಿನಿಧಿ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಕಾಲೇಜು ಉಪನ್ಯಾಸಕಿ ಸುನೀತಾ ಗಿರೀಶ್ ನಡೆಸಿಕೊಟ್ಟರು.

ಸಮಾರಂಭದ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಲೀಲಾವತಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಬಿ.ಡಿ ರಾಜು ರೈ, ಕೊಡಗು ಪತ್ರಕರ್ತರ ಸಂಘದ ಹಿರಿಯ ಸದಸ್ಯ ಕೆ.ಎಚ್ ಶಿವಣ್ಣ ಹಾಜರಿದ್ದರು.