ಮಡಿಕೇರಿ, ನ. ೧೨: ಮಕ್ಕಳಿಗೆ ಉನ್ನತ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನೂ ಕಲಿಸಬೇಕು. ಹಿರಿಯರ ಬಗ್ಗೆ ಕಾಳಜಿ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಕರೆ ನೀಡಿದರು.
ಭಾರತ ಸರ್ಕಾರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ವೈದ್ಯಕೀಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರನ್ನು ಪ್ರೀತಿ ಗೌರವ ಮತ್ತು ತಾಳ್ಮೆಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ದೊಡ್ಡ ಹುದ್ದೆಗಳಿಗೆ ಏರಿಸುವುದಷ್ಟೇ ಪೋಷಕರ ಜವಾಬ್ದಾರಿಯಲ್ಲ. ಅವರಲ್ಲಿ ಮಾನವೀಯ ಮೌಲ್ಯಗಳು, ಸಂಸ್ಕಾರ ಮತ್ತು ಹಿರಿಯರ ಬಗ್ಗೆ ಗೌರವ ಬೆಳೆಸುವುದು ಕೂಡ ಅಷ್ಟೇ ಮುಖ್ಯ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಸುಧಾರಣೆಯಿಂದ ಹಿರಿಯ ನಾಗರಿಕರ ಆಯುಷ್ಯ ಹೆಚ್ಚಾಗಿದೆ. ಆದರೆ ಆಯುಷ್ಯ ಹೆಚ್ಚುವುದಷ್ಟೇ ಮುಖ್ಯವಲ್ಲ, ವೃದ್ಧಾಪ್ಯದಲ್ಲಿ ಅವರಿಗೆ ಉತ್ತಮ ಆರೈಕೆ, ಪ್ರೀತಿ ಮತ್ತು ಮಾನಸಿಕ ನೆಮ್ಮದಿ ಒದಗಿಸುವುದು ಅಗತ್ಯವಾಗಿದೆ. ವಯಸ್ಸಾದವರನ್ನು ನಿರ್ಲಕ್ಷ್ಯದಿಂದ ಕಾಣದೆ, ತಾಳ್ಮೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕು. ಇಂದು ಯುವಕರಾಗಿರುವವರಿಗೂ ಮುಂದೊAದು ದಿನ ವೃದ್ಧಾಪ್ಯ ಬರಲಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉನ್ನತ ಪದವಿಗಳನ್ನು ಕೊಡಿಸಬೇಕೆಂಬ ಆಸೆ ಪ್ರತಿಯೊಬ್ಬ ಪೋಷಕರಿಗೂ ಇರುತ್ತದೆ. ಆದರೆ ಶಿಕ್ಷಣದ ಉದ್ದೇಶ ಕೇವಲ ಪದವಿ ಮತ್ತು ಉದ್ಯೋಗಕ್ಕೆ ಸೀಮಿತವಾಗಬಾರದು. ಜೀವನದಲ್ಲಿ ಮೌಲ್ಯ ಅಳವಡಿಸಿಕೊಳ್ಳುವುದು ನಿಜವಾದ ಶಿಕ್ಷಣದ ಭಾಗವಾಗಬೇಕು. ಉನ್ನತ ಶಿಕ್ಷಣ ಪಡೆದ ಕೆಲವರು ಉದ್ಯೋಗದ ನಿಮಿತ್ತ ವಿದೇಶಗಳಿಗೆ ತೆರಳಿ, ತಮ್ಮ ಅನುಕೂಲಕ್ಕಾಗಿ ಮನೆಯಲ್ಲಿರುವ ವಯೋವೃದ್ಧ ತಂದೆ-ತಾಯAದಿರನ್ನು ವೃದ್ಧಾಶ್ರಮಗಳಿಗೆ ಸೇರಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪ್ರೀತಿ, ಸಮಯ ಮತ್ತು ಕಾಳಜಿ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹಿರಿಯರು ಕೂಡ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು ಎಂದರು.
ಕಾನೂನು ಸೇವೆಗಳ ಪ್ರಾಧಿಕಾರವು ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆಯಡಿ ಅರ್ಹರಿಗೆ ಉಚಿತ ಕಾನೂನು ನೆರವು ಒದಗಿಸುತ್ತಿದೆ. ಕಾನೂನಿಗೆ ಸಂಬAಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಸಾರ್ವಜನಿಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಸುಳ್ಳು ಭರವಸೆಗಳನ್ನು ನೀಡದೆ, ಪ್ರಾಮಾಣಿಕ ಪ್ರಯತ್ನದ ಮೂಲಕ ನ್ಯಾಯ ದೊರಕಿಸಿಕೊಡಲು ಪ್ರಾಧಿಕಾರ ಸದಾ ಸಿದ್ಧವಿದೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಯೋಗೇಶ್ ಮಾತನಾಡಿ, ಪ್ರತಿಯೊಬ್ಬರೂ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಒಂದಲ್ಲ ಒಂದು ಹಂತದಲ್ಲಿ ಹಿರಿಯ ನಾಗರಿಕರ ಸಾಲಿಗೆ ಸೇರುತ್ತಾರೆ ಎಂಬ ಸತ್ಯವನ್ನು ಮರೆಯಬಾರದು. ಹಿರಿಯ ನಾಗರಿಕರಿಗೆ ಕಾನೂನಿನಡಿ ನ್ಯಾಯ ದೊರಕಿಸಿಕೊಡುವ ವ್ಯವಸ್ಥೆಗಳಿವೆ. ಹೆತ್ತವರನ್ನು ನೋಡಿಕೊಳ್ಳುವುದು ಮಕ್ಕಳ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ತಮ್ಮ ಇಡೀ ಜೀವನವನ್ನು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಮುಡಿಪಾಗಿಟ್ಟ ತಾಯಿ-ತಂದೆಯರು ವೃದ್ಧಾಪ್ಯದಲ್ಲಿ ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಒಳಗಾಗುವುದು ನೋವಿನ ಸಂಗತಿ ಎಂದು ಹೇಳಿದರು.
ಇಂದಿನ ದಿನಗಳಲ್ಲಿ ಮಾನವೀಯ ಸಂಬAಧಗಳು ಮತ್ತು ಕುಟುಂಬದ ಬಾಂಧವ್ಯಗಳು ಯಾಂತ್ರಿಕವಾಗುತ್ತಿವೆ. ತಾಯಿ ಅಥವಾ ತಂದೆ ನಿಧನರಾದಾಗ ಅಂತ್ಯಕ್ರಿಯೆಗೆ ಹಾಜರಾಗಲು ಸಾಧ್ಯವಾಗದಿದ್ದರೂ, ವೀಡಿಯೋ ಮೂಲಕ ಅಂತಿಮ ದರ್ಶನ ಪಡೆಯುವಂತೆ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸುತ್ತ ದಿನಗಳಲ್ಲಿ ಈ ರೀತಿಯ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವೃದ್ಧರಿಗೆ ಯಾರಾದರೂ ನೆರವು ನೀಡಿದರೆ ಅದನ್ನು ನೋಡಿ ಭಾವುಕರಾಗುವ ನಾವು, ನಮ್ಮ ಮನೆಯಲ್ಲಿರುವ ತಂದೆ-ತಾಯಿ ಹಾಗೂ ಅಜ್ಜ-ಅಜ್ಜಿಯರನ್ನು ಏಕೆ ಅದೇ ಪ್ರೀತಿಯಿಂದ ನೋಡಿಕೊಳ್ಳುತ್ತಿಲ್ಲ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಹೊರಗಿನವರ ಬಗ್ಗೆ ತೋರುವ ಕಾಳಜಿ ನಮ್ಮ ಹೆತ್ತವರ ಬಗ್ಗೆಯೂ ಇರಬೇಕು ಎಂದು ತಿಳಿಸಿದರು.
ಕೊಡಗು ಜಿಲ್ಲಾಸ್ಪತ್ರೆಯ ಮಾನಸಿಕ ಆರೋಗ್ಯ ವಿಭಾಗದ ವೈದ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಯುವ ವಯಸ್ಸಿನಲ್ಲಿ ನಾವು ರೂಢಿಸಿಕೊಳ್ಳುವ ಧೂಮಪಾನ, ಮದ್ಯಪಾನ ಸೇರಿದಂತೆ ಹಲವು ಕೆಟ್ಟ ಅಭ್ಯಾಸಗಳು ವೃದ್ಧಾಪ್ಯದಲ್ಲಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ಅಗತ್ಯ. ಮರೆವಿನ ಸಮಸ್ಯೆಗೆ ಪೌಷ್ಟಿಕಾಂಶದ ಕೊರತೆ, ತಲೆಗೆ ಆಗಿರುವ ಗಾಯ ಅಥವಾ ಇತರ ಆರೋಗ್ಯ ಸಮಸ್ಯೆಗಳು ಕಾರಣವಾಗಿರಬಹುದು. ಇಂತಹ ಕಾರಣಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಿದರೆ ಕೆಲವು ಸಂದರ್ಭಗಳಲ್ಲಿ ಮರೆವಿನ ಸಮಸ್ಯೆಯನ್ನು ಸುಧಾರಿಸಬಹುದು.
ಹಿರಿಯ ನಾಗರಿಕರ ಸಮಸ್ಯೆಗಳು ಕೇವಲ ಆರ್ಥಿಕ ಅಥವಾ ದೈಹಿಕ ಸಮಸ್ಯೆಗಳಿಗೆ ಸೀಮಿತವಾಗಿರುವುದಿಲ್ಲ. ಕುಟುಂಬದಲ್ಲಿನ ಸಂಬAಧಗಳು, ಹೊಂದಾಣಿಕೆ ಮತ್ತು ಮಾನಸಿಕ ನೆಮ್ಮದಿಯೂ ಅವರ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಹಿಂದಿನ ತಲೆಮಾರಿನವರು ಅವಿಭಕ್ತ ಕುಟುಂಬಗಳಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊಂದಾಣಿಕೆಯಿAದ ನಿಭಾಯಿಸುತ್ತಿದ್ದರು. ಆದರೆ ಇಂದಿನ ಸಣ್ಣ ಕುಟುಂಬಗಳಲ್ಲಿ ಇಂತಹ ಸಮಸ್ಯೆಗಳು ಹಿರಿಯರ ಮಾನಸಿಕ ನೆಮ್ಮದಿಯ ಮೇಲೂ ಪರಿಣಾಮ ಬೀರುತ್ತಿವೆ ಎಂದರು.
ಸಾAತ್ವನ ಕೇಂದ್ರದ ಅಧ್ಯಕ್ಷರು ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ವೃದ್ಧಾಪ್ಯದಲ್ಲಿ ಹಿರಿಯರಿಗೆ ಹಣಕಾಸಿನ ನೆರವಿಗಿಂತಲೂ ಪ್ರೀತಿ, ಆತ್ಮೀಯತೆ ಮತ್ತು ಮಾನಸಿಕ ಬೆಂಬಲ ಹೆಚ್ಚು ಅಗತ್ಯವಾಗಿರುತ್ತದೆ. ತಂದೆ-ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಮನೋಭಾವ ದೂರವಾಗಬೇಕು. ಮನೆಯಲ್ಲಿಯೇ ಅವರನ್ನು ಪ್ರೀತಿಯಿಂದ ನೋಡಿಕೊಳ್ಳುವ ವಾತಾವರಣ ನಿರ್ಮಾಣವಾಗಬೇಕು. ವಯಸ್ಸಾದಂತೆ ಕೆಲವರು ಮತ್ತೆ ಮಕ್ಕಳಂತೆ ವರ್ತಿಸುವುದು ಸಹಜ. ೬೦ ರಿಂದ ೭೦ ವರ್ಷ ದಾಟಿದ ಬಳಿಕ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭದಲ್ಲಿ ಹಿರಿಯರ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಅವರೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಬೇಕು ಎಂದರು.
ಭಾರತೀಯ ಸೇವಾ ರಕ್ಷಕ ಸಂಸ್ಥೆಯ ವತಿಯಿಂದ ಹಿರಿಯ ನಾಗರಿಕರ ಅನುಕೂಲಕ್ಕಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಹಿರಿಯರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ, ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶ್ರವಣ ಸಾಧನಗಳನ್ನು ವಿತರಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಇಂತಹ ಅಗತ್ಯವಿರುವವರು ಹಿರಿಯ ನಾಗರಿಕರ ಇಲಾಖೆಯನ್ನು ಸಂಪರ್ಕಿಸಿದಲ್ಲಿ ಶ್ರವಣ ಸಾಧನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿರಿಯ ನಾಗರಿಕರಾದ ಸುನಂದ ಪ್ರಾರ್ಥಿಸಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಜಿ.ವಿಮಲ ಸ್ವಾಗತಿಸಿದರು, ಮಾಹಿತಿ ಸಲಹೆಗಾರರಾದ ನವೀನ್ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಸಾಮಾನ್ಯ ವೈದ್ಯ, ಚರ್ಮರೋಗ, ಕಣ್ಣು, ಮಾನಸಿಕ ಆರೋಗ್ಯ, ಕೀಲು ಮತ್ತು ಮೂಳೆ, ಪ್ರಸೂತಿ ಮತ್ತು ಸ್ತ್ರೀ ರೋಗ, ಶ್ವಾಸಕೋಶ ಹಾಗೂ ಇತರೆ ವಿಭಾಗಗಳಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಔಷಧಿ ವಿತರಿಸಲಾಯಿತು.